ಜ.27 : ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ | ಮಾಹಿತಿ ನೀಡಿದ ಕಾರ್ಯದರ್ಶಿ ಪಿ.ರಾಜೀವ್

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಜ.27 ರಂದು ನಡೆಸಲು ನಿರ್ಧರಿಸಲಾಗಿದೆ.

ಬಿಜಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿ, ಲೋಕಸಭೆ ಚುನಾವಣೆ ಇನ್ನೇನು ಬರಲಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 5.30 ರ ತನಕ ಸಭೆ ಏರ್ಪಡಿಸಲಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೈಗೊಳ್ಳಬೇಕಾದ ಚುನಾವಣಾ ಸಿದ್ಧತೆಗಳು, ಪ್ರಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಸಭೆಯಲ್ಲಿ ಕೇಂದ್ರ ಸಚಿವ ಭೂಪೇಂದರ್ ಯಾದವ್ ಪಾಲ್ಗೊಳ್ಳಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಧ್ಯಕ್ಷತೆ ವಹಿಸುವರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top