ಪುತ್ತೂರು: ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನ ವಾರ್ಷಿಕ ನೇಮೋತ್ಸವದ ಅಂಗವಾಗಿ ವಿವಿಧ ವೈದಿಕ ಕಾರ್ಯಕ್ರಮ ಬುಧವಾರ ನಡೆಯಿತು.
ನೇಮೋತ್ಸವದ ಅಂಗವಾಗಿ ಬೆಳಿಗ್ಗೆ ಕಾರ್ಜಾಲುಗುತ್ತಿನಲ್ಲಿ ಸ್ಥಳಶುದ್ಧಿ ಹೋಮ, ಕಲಶ ಪ್ರತಿಷ್ಠೆ, ಶ್ರೀ ದೈವಸ್ಥಾನದಲ್ಲಿ ಗಣಹೋಮ, ಶ್ರೀ ದೈವಗಳ ತಂಬಿಲ, ನಾಗತಂಬಿಲ ನಡೆಯಿತು. ಬಳಿಕ ಮಧ್ಯಾಹ್ನ ಸುಮಾರು 10 ಸಾವಿರ ಮಂದಿಗೆ ಅನ್ನಸಂತರ್ಪಣೆ ಜರಗಿತು.
ರಾತ್ರಿ 7 ಗಂಟೆಗೆ ಶ್ರೀ ದೈವಗಳ ಮೂಲನೆಲೆ ಕಾರ್ಜಾಲು ಗುತ್ತಿನಿಂದ ಭಂಡಾರು ಬಂದು, 9 ಗಂಟೆಗೆ ಗೊಂದಳ ಪೂಜೆ, ರಾತ್ರಿ 12 ಕ್ಕೆ ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ಜರಗಿತು.
ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತಾಧಿಕಾರಿ, ಮಾಜಿ ಅಧ್ಯಕ್ಷರು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.