ಜ.27 ರಂದು ಕೊಕ್ಕಪುಣಿ ಶ್ರೀ ಅರಸು ಕುರಿಯಾಡಿತ್ತಾಯ ಚಾವಡಿಯಲ್ಲಿ ಪಂಚಮ ವರ್ಷದ ಪ್ರತಿಷ್ಠಾ ವರ್ಧಂತಿ

ಪುತ್ತೂರು: ಬೋಳಂತೂರು ಗ್ರಾಮದ ಕೊಕ್ಕಪುಣಿ ಶ್ರೀ ಅರಸು ಕುರಿಯಾಡಿತ್ತಾಯ ಚಾವಡಿಯಲ್ಲಿ ಪಂಚಮ ವರ್ಷದ ಪ್ರತಿಷ್ಠಾ ವರ್ಧಂತಿ ಜ.27 ಶನಿವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 7 ಕ್ಕೆ ಗಣಹೋಮ, ಸಂಜೆ 3.30 ರಿಂದ 4 ರ ವರೆಗೆ ತುಳಸೀವನ ಶ್ರೀ ಸಿದ್ಧಿ ವಿನಾಯಕ ಭಜನಾ ಮಂಡಳಿ, 5 ರಿಂದ 6 ರ ವರೆಗೆ ಗುಂಡಿಮಜಲು ಶೃಂಗಗಿರಿ ಶ್ರೀ ಶಾರದಾಂಬಾ ಭಜನಾ ಮಂಡಳಿ ವತಿಯಿಂದ ಕುಣಿತ ಭಜನೆ ನಡೆಯಲಿದೆ. ರಾತ್ರಿ 7.30 ರಿಂದ ದೈವಗಳಿಗೆ ತಂಬಿಲ, ಹೂವಿನ ಪೂಜೆ, ಮಹಾಪೂಜೆ, ರಾತ್ರಿ 8 ರಿಂದ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ನಡೆಯಲಿದೆ.

ರಾತ್ರಿ 9 ರಿಂದ ಶ್ರೀ ಮಂಗಳಾದೇವಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ ಮಂಗಳೂರು ವತಿಯಿಂದ ‘ಮಾಯೊದ ಮಯ್ಕಾರೆ ಪಂಜುರ್ಲಿ’ ತುಳು ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top