ಪುತ್ತೂರು:ಪುಣಚಾ ಗ್ರಾಮದಲ್ಲಿನ ಒಳ ರಸ್ತೆಗಳಲ್ಲಿ ಕಾಂಕ್ರೀಟ್ ಕಾಮಗಾರಿ ನಡೆದಿಲ್ಲ. ಕೆಲವೊಂದು ರಸ್ತೆಗಳಿಗೆ ಇದುವರೆಗೂ ಯಾವುದೇ ಅನುದಾನ ನೀಡಿಲ್ಲ. ಗ್ರಾಮದ ಅಭಿವೃದ್ದಿಗೆ ಜನಪ್ರತಿನಿಧಿಗಳ ಅನುದಾನ ಶೂನ್ಯವೆಂದೇ ಹೇಳಿದರೂ ತಪ್ಪಾಗಲಾರದು ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.
ಅವರು ಪುಣಚಾ ಗ್ರಾಮದ ವಿವಿಧ ರಸ್ತೆಗಳಿಗೆ ಒಟ್ಟು 75 ಲಕ್ಷ ಅನುದಾನವನ್ನು ಬಿಡುಗಡೆಮಾಡಿದ್ದು, ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ಜನರ ಬೇಡಿಕೆ ಹಿನ್ನಲೆಯಲ್ಲಿ ಅನುದಾನವನ್ನು ನೀಡುವ ಕೆಲಸವನ್ನು ಮಾಡಿದ್ದೇನೆ. ಜನಪ್ರತಿನಿಧಿಗಳು ಪುಣಚಾ ಗ್ರಾಮವನ್ನು ಸಂಪೂರ್ಣ ಕಡೆಗಣಿಸಿದ್ದಾರೆ ಎಂದು ಹೇಳಿದರು.
ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್.ಮಹಮ್ಮದ್ ಮಾತನಾಡಿ, ಹಲವಾರು ವರ್ಷಗಳಿಂದ ಅಭಿವೃದ್ದಿಯಾಗದ ಅನೇಕ ರಸ್ತೆಗಳಿಗೆ ಅನುದಾನ ನೀಡುವ ಮೂಲಕ ಶಾಸಕರು ಪುಣಚಾ ಗ್ರಾಮದಲ್ಲಿಯೂ ಅಭಿವೃದ್ದಿ ಪರ್ವ ಆರಂಭಿಸಿದ್ದಾರೆ. ಇದಕ್ಕಾಗಿ ಶಾಸಕರನ್ನು ಅಭಿನಂದಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ವಲಯಾಧ್ಯಕ್ಷರಾದ ಬಾಲಕೃಷ್ಣ ಪೂಜಾರಿ ಹಿತ್ತಿಲು, ವಲಯ ಕಾರ್ಯದರ್ಶಿ ಮಹಮ್ಮದ್ ಸಿರಾಜ್ ಮನಿಲ, ಗ್ರಾಪಂ ಅಧ್ಯಕ್ಷೆ ಬೇಬಿ, ಸದಸ್ಯರಾದ ಲಲಿತಾ, ಗಿರಿಜ, ರಾಜೇಂದ್ರ ರೈ ಬೈಲು, ಬಾಲಕೃಷ್ಣ ರೈ ಬೈಲು, ಎಂ ಎಸ್ ಹಮೀದ್, ನಾರಾಯಣ ನಾಯ್ಕ, ಅಲ್ಬರ್ಟ್ ಡಿಸೋಜಾ, ಕ್ಷೇವಿಯರ್ ಡಿಸೋಜಾ, ವೆಂಕಪ್ಪ ಗೌಡ ಅಜೇರು ಮಜಲು, ಸೀತಾರಾಮ ಪಟಿಕಲ್ಲು, ಮಹಾಲಿಂಗ ನಾಯ್ಕ, ಕರೀಂ ಕುದ್ದುಪದವು, ಮೌರಿಸ್‌ಟೆಲ್ಲಿಸ್, ಶರೀಫ್ ಕೊಲ್ಲಪದವು, ಶ್ರೀನಿವಾಸ ನಾರ್ಣಡ್ಕ, ಇಂಜಿನಿಯರ್ ರಾಜೇಂದ್ರ ಪ್ರಸಾದ್ ಶೆಟ್ಟಿ, ಗ್ರಾಮಸ್ಥರು ಉಪಸ್ತಿತರಿದ್ದರು.