ಬೆಂಗಳೂರು: ಜಗದೀಶ್ ಶೆಟ್ಟರ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಸೇರ್ಪಡೆ ಬಗ್ಗೆ ಮಾಹಿತಿ ನೀಡಲಾಯಿತು.
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ನಿವಾಸದಲ್ಲಿ ಸಭೆ ನಡೆದು, ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಉಪಸ್ಥಿತರಿದ್ದರು.
ಶೆಟ್ಟರ್ ಬಿಜೆಪಿ ಮರು ಸೇರ್ಪಡೆ ಬಗ್ಗೆ ಹೇಳಿಕೆ ನೀಡಿರುವ ಡಿ.ಕೆ. ಶಿವಕುಮಾರ್, ಶೆಟ್ಟರ್ ಅವರು ಬಿಜೆಪಿಯಿಂದ ಸ್ಪರ್ಧಿಸಿ ಸೋತಾಗಲೂ, ಕಾಂಗ್ರೆಸಿಗೆ ಕರೆಸಿಕೊಂಡು ಗೌರವಪೂರ್ವಕವಾಗಿ ನಡೆಸಿಕೊಂಡಿದ್ದೇವೆ. ವಿಧಾನ ಪರಿಷತ್ ಟಿಕೇಟ್ ನೀಡಿದ್ದೇವೆ. ಹಾಗಿದ್ದು, ಬಿಜೆಪಿ ಸೇರ್ಪಡೆಗೊಳ್ಳುವ ಮೂಲಕ ವಿಶ್ವಾಸಕ್ಕೆ ಧಕ್ಕೆ ತಂದಿದ್ದಾರೆ ಎಂದ ಅವರು, ಈವರೆಗೂ ಶೆಟ್ಟರ್ ಅವರ ರಾಜೀನಾಮೆ ಪತ್ರ ತನಗೆ ತಲುಪಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇನ್ನೊಂದೆಡೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಜಗದೀಶ್ ಶೆಟ್ಟರ್ ಅವರ ಬಿಜೆಪಿ ಸೇರ್ಪಡೆ ಕುರಿತು ಮಾಹಿತಿ ಇಲ್ಲ ಎಂದಿದ್ದಾರೆ.