ಜ. 27ರಂದು ಶಿವಸುಜ್ಞಾನ ತೀರ್ಥ ಶ್ರೀಗಳಿಂದ ಪುತ್ತೂರು ವಲಯ ಭಕ್ತರ ಸಮಾಲೋಚನಾ ಸಭೆ

ಪುತ್ತೂರು: ಅರೆಮಾದನಹಳ್ಳಿ ಶ್ರೀ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳ ನೇತೃತ್ವದಲ್ಲಿ ಇಲ್ಲಿನ ಬೊಳುವಾರು ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ಜ. 27ರಂದು ಪುತ್ತೂರು ವಲಯ ಭಕ್ತರ ಸಮಾಲೋಚನಾ ಸಭೆ ನಡೆಯಲಿದೆ.

ಸಂಜೆ 4 ಗಂಟೆಗೆ ಸರಿಯಾಗಿ ನಡೆಯುವ ಸಭೆಯಲ್ಲಿ ಮಹಾಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ಅಲ್ಲದೇ, ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ಕಜ್ಕೆಯ ಶಾಖಾ ಮಠದಲ್ಲಿ ನಿರ್ಮಾಣಗೊಂಡಿರುವ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಬಗ್ಗೆಯೂ ಶ್ರೀಗಳು ಮಾತನಾಡಲಿದ್ದಾರೆ.

ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನದ ಪುನರ್ ನಿರ್ಮಾಣಕ್ಕೆ ಮುಂದಾಗಿದ್ದು, ಉದ್ದೇಶಿತ ದೇವಸ್ಥಾನ ನಿರ್ಮಾಣದಲ್ಲಿ ಗರ್ಭಗುಡಿ, ತೀರ್ಥಮಂಟಪ, ಸುತ್ತುಪೌಳಿ, ಗಣಪತಿ ಗುಡಿ, ಗುರು ಸಾನಿಧ್ಯ, ತೀರ್ಥಬಾವಿ, ನಾಗ ಸಾನ್ನಿಧ್ಯ ಮತ್ತು ವಸಂತ ಮಂಟಪ ನಿರ್ಮಾಣದ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top