ಬೆಂಗಳೂರು: ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಪಟ್ಟಿಯು ಕೊನೆಗೂ ಬಿಡುಗಡೆಯಾಗಿದೆ. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.
ನಿಗಮ ಮಂಡಳಿ ಅಧ್ಯಕ್ಷರನ್ನು ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಎರಡು ವರ್ಷದ ಅವಧಿಗೆ ನೇಮಕ ಮಾಡಲಾಗಿದ್ದು, ಶಾಂತಿನಗರ ಶಾಸಕ ಎನ್.ಎ ಹ್ಯಾರಿಸ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಸಾಗರದ ಬೇಳೂರು ಗೋಪಾಲಕೃಷ್ಣ ಅವರಿಗೆ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ, ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ ಅವರಿಗೆ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ, ವಿನಯ್ ಕುಲಕರ್ಣಿ ಅವರಿಗೆ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ನೇಮಕ ಮಾಡಲಾಗಿದೆ.
ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಹೀಗಿದೆ:

