ಬೆಳ್ತಂಗಡಿ: ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಡುಮದ್ದು ತಯಾರಿಸುವ ಘಟಕವೊಂದರಲ್ಲಿ ಸ್ಫೋಟ ಉಂಟಾಗಿ ಕನಿಷ್ಠ ಇಬ್ಬರು ಮೃತಪಟ್ಟಿರುವ ಘಟನೆ ರವಿವಾರ ನಡೆದಿದೆ.


ಸ್ಫೋಟದ ತೀವ್ರತೆಗೆ ದೇಹಗಳು ಛಿದ್ರಗೊಂಡಿರುವುದಾಗಿ ತಿಳಿದು ಬಂದಿದೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ.
ಘಟಕದ ಮಾಲಕ ಬಶೀರ್ ಸ್ಥಳದಿಂದ ಪರಾರಿಯಾಗಿದ್ದು, ಇನ್ನು ಹೆಚ್ಚಿನ ಸಾವು ಸಂಭವಿಸಿರುವ ಸಾಧ್ಯತೆ ಇದ್ದು ಹುಡುಕಾಟ ನಡೆಯುತ್ತಿದೆ.
ವೇಣೂರು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇಬ್ಬರು ಸಾವನ್ನಪ್ಪಿರುವುದಾಗಿ ಪ್ರಾಥಮಿಕ ಮಾಹಿತಿಗಳು ಲಭ್ಯವಾಗುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.