ಪುತ್ತೂರು: ಅಪ್ರಾಪ್ತ ಬಾಲಕಿಯೋರ್ವಳಿಗೆ ಯುವಕ ಶಾಕೀರ್ ಕಿರುಕುಳ ನೀಡಿದ ಘಟನೆ ಶನಿವಾರ ತಡರಾತ್ರಿ ಪುತ್ತೂರು ನಗರದಲ್ಲಿ ನಡೆದಿದೆ.

ಆರೋಪಿಯನ್ನು ಕಡಬ ಮೂಲದ ಶಾಕೀರ್ ಎಂದು ಗುರುತಿಸಲಾಗಿದೆ. ಈತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಆತನ ಬಗ್ಗೆ ತನಿಖೆಯನ್ನು ಮುಂದುವರಿಸಿದ್ದಾರೆ.
ಪುತ್ತೂರು ಮೂಲದ ಅಪ್ರಾಪ್ತ ಬಾಲಕಿಗೆ ದಾರಿ ಮಧ್ಯೆ ಆರೊಪಿ ದೌರ್ಜನ್ಯ ಎಸಗಿದ್ದಾನೆಂದು ಆರೋಪಿಸಲಾಗಿದೆ. ಇದೇ ಸಂದರ್ಭ ಆರೋಪಿಯನ್ನು ತಮ್ಮ ವಶಕ್ಕೆ ನೀಡಬೇಕೆಂದು ತಂಡವೊಂದು ಠಾಣೆಯ ಮುಂದೆ ಜಮಾಯಿಸಿತ್ತು. ಉದ್ರಿಕ್ತರನ್ನು ಹಿಂದೂ ಮುಖಂಡ ಅರುಣ್ ಕುಮಾರ ಪುತ್ತಿಲ ಅವರು ಸಮಾಧಾನಿಸಿದರು.
ಆರೊಪಿಯ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ.