ಬಂಟ್ವಾಳ: ಆಕಸ್ಮಿಕ ಬೆಂಕಿ ತಗುಲಿ ಫೈವುಡ್ ಫ್ಯಾಕ್ಟರಿ ಭಸ್ಮವಾಗಿ 2 ಲಕ್ಷ ರೂ. ನಷ್ಟ ಉಂಟಾದ ಘಟನೆ ಸಜೀಪ ಸಮೀಪದ ಕೋಟೆಕಣಿಯಲ್ಲಿ ನಡೆದಿದೆ.
ಶಬೀರ್ ಅವರಿಗೆ ಸೇರಿದ ಫ್ಯಾಕ್ಟರಿಯಲ್ಲಿ ರಾಶಿ ಹಾಕಿದ್ದ ಮರದ ಅವಶೇಷದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಮಾಹಿತಿ ತಿಳಿಸಿದ ತಕ್ಷಣ ಕಾರ್ಯಾಚರಣೆ ನಡೆಸಿದ ಪಾಂಡೇಶ್ವರ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರಾಜ, ಬಂಟ್ವಾಳ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳಾದ ಚಂದ್ರಕಾಂತ, ಪುರುಷೋತ್ತಮ, ರಾಜೇಶ್ ಶೆಟ್ಟಿ, ಕಿರಣ್ ಕುಮಾರ್, ರುಕ್ಕಯ್ಯ ಅಮೀನ್, ಕೆ.ಸುರೇಂದ್ರ, ಭಾಗವಹಿಸಿದ ಬೆಂಕಿ ನಂದಿಸುವಲ್ಲಿ ಸಹಕರಿಸಿದರು.