ಪುತ್ತೂರು: ತೆಂಕಿಲದಲ್ಲಿ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಕೇಂದ್ರದ ಉದ್ಘಾಟನಾ ಸಮಾರಂಭ ಇಂದು ನಡೆಯಿತು.
ಶಾಸಕ ಅಶೋಕ್ ಕುಮಾರ್ ರೈ ಅಂಗನವಾಡಿ ಕಟ್ಟಡ ಉದ್ಘಾಟಿಸಿ, ಅಂಗನವಾಡಿಯಲ್ಲಿ ತಾಯಿಯ ಶಿಕ್ಷಣ ಮಕ್ಕಳಿಗೆ ದೊರೆಯುತ್ತಿದೆ. ಪೌಷ್ಠಿಕ ಆಹಾರದ ಜೊತೆಗೆ ಮಕ್ಕಳ ಬೆಳವಣಿಗೆಗೆ ಪೂರಕವಾದ ವ್ಯವಸ್ಥೆಗಳು ಅಂಗನವಾಡಿಗಳಲ್ಲಿ ಇದ್ದು ಪೋಷಕರು ಮಕ್ಕಳನ್ನು ಅಂಗನವಾಡಿಗೆ ದಾಖಲಿಸುವ ಮೂಲಕ ಕೇಂದ್ರಗಳನ್ನು ಉಳಿಸುವ ಕೆಲಸವನ್ನು ಮಾಡಬೇಕು ಎಂದರು.
ಈ ಭಾಗದಲ್ಲಿ ಅಂಗನವಾಡಿ ಕಟ್ಟಡದ ಕೊರತೆ ಇರುವ ಬಗ್ಗೆ ಸ್ಥಳೀಯ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು. ಸುಮಾರು 13 ಲಕ್ಷ ರೂ ವೆಚ್ಚದಲ್ಲಿ ನೂತನ ಅಂಗನವಾಡಿ ಕಟ್ಟಡದ ನಿರ್ಮಾಣ ಕಾರ್ಯ ನಡೆಸಲಾಗಿದೆ. ಸ್ಥಳೀಯರಾದ ಪ್ರಕಾಶ್ ಗೌಡ ಎಂಬವರು ಅಂಗನವಾಡಿಗೆ ಸ್ಥಳದಾನವನ್ನು ಮಾಡಿದ್ದರು. ಕಟ್ಟಡ ಉದ್ಘಾಟಿಸಿ ಮಾತನಾಡಿದ ಶಾಸಕರು
ಬನ್ನೂರು ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ಮಾತನಾಡಿದರು. ವೇದಿಕೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ, ಬಾಲವಿಕಾಸ ಸಮಿತಿ ಅಧ್ಯಕ್ಷೆ ರೇವತಿ, ಅಂಗನವಾಡಿ ಮೇಲ್ವಿಚಾರಕಿ ಜಲಜಾಕ್ಷಿ, ಶಶಿಕಲಾ ನಾಗೇಶ್, ಹಿರಿಯರಾದ ಮುತ್ತಕ್ಕ, ಅನಿಲ್ ಗೌಡ ತೆಂಕಿಲ ಮೊದಲಾದವರು ಉಪಸ್ಥಿತರಿದ್ದರು.
ರತ್ನಾ ಸ್ವಾಗತಿಸಿ, ಪ್ರಶಾಂತಿ ವಂದಿಸಿದರು. ಜಯಂತಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ದಾನಿಗಳು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು.