ಪುತ್ತೂರು: ಇಂದು ನಡೆಯಬೇಕಾಗಿದ್ದ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಲಾದ ‘ಅನ್ನಪೂರ್ಣೇಶ್ವರಿ ಅನ್ನಛತ್ರ’ದ ಲೋಕಾರ್ಪಣೆ ಕಾರ್ಯಕ್ರಮ ಮುಂದೂಡಲಾಗಿದೆ.
ಜ.31 ರಂದು ಕಾರ್ಯಕ್ರಮ ನಿಗದಿಯಾಗಿತ್ತು. ತಾಂತ್ರಿಕ ಕಾರಣಗಳಿಂದ ಮುಂದೂಡಲಾಗಿದ್ದು, ಫೆ.3 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಲೋಕಾರ್ಪಣೆ ಅಂಗವಾಗಿ ಬೆಳಿಗ್ಗೆ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಅನ್ನಪೂರ್ಣೇಶ್ವರಿ ಯಜ್ಞ, ಮಹಾಗಣಪತಿ ಹೋಮ ನಡೆದು ಬಳಿಕ ಅನ್ನಛತ್ರ ಲೋಕಾರ್ಪಣೆಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದೇವರ ಗಂಧ ಪ್ರಸಾದ ಸ್ವೀಕರಿಸಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.