ಉಡುಪಿ: ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ (ಮಾಹೆ) ಹಾಗೂ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಸಹಯೋಗದಲ್ಲಿ ಡಾ.ಕೆ.ಚಿನ್ನಪ್ಪ ಗೌಡ ಅವರ ಕೃತಿ ಮಾಚಾರು ಗೋಪಾಲ ನಾಯ್ಕ ಹೇಳಿದ ‘ಸಿರಿಸಂಧಿ’ ಬಿಡುಗಡೆ ಸಮಾರಂಭ ಫೆ.10 ಶನಿವಾರ ಬೆಳಿಗ್ಗೆ 10.30 ಕ್ಕೆ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.
ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರದದ ಸಲಹಾ ಸಮಿತಿ ಅಧ್ಯಕ್ಷ ಡಾ.ಬಿ.ಎ.ವಿವೇಕ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮಾಹೆ ಸಹಕುಲಾಧಿಪತಿಗಳಾದ ಡಾ.ಎಚ್.ಎಸ್.ಬಲ್ಲಾಳ್ ಕೃತಿ ಅನಾವರಣ ಮಾಡುವರು.
ವಿಮರ್ಶಕ ಡಾ.ಬಿ.ಜನಾರ್ದನ ಭಟ್ ಕೃತಿ ವಿಮರ್ಶೆ ಮಾಡುವರು. ಎಂಜಿಎಂ ಕಾಲೇಜು ಪ್ರಾಂಶುಪಾಲ ಲಕ್ಷ್ಮೀನಾರಾಯಣ ಉಪಸ್ಥಿತರಿರುವರು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.