ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಕೇಂದ್ರದ ಮಧ್ಯಂತರ ಬಜೆಟ್ ಮಂಡನೆ ಮಾಡಿದರು.
ಈ ಮೂಲಕ 2019 ರಿಂದ ಈ ವರೆಗೆ ಪೂರ್ಣಾವಧಿ ವಿತ್ತ ಮಂತ್ರಿಯಾಗಿ ಕೆಲಸ ಮಾಡಿದ ದೇಶದ ಮೊದಲ ಮಹಿಳೆ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ.
40 ಸಾವಿರ ರೈಲು ಬೋಗಿಗಳನ್ನ ವಂದೇ ಭಾರತ್ಗೆ ಉನ್ನತೀಕರಣ ಮಾಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದರು. ನಗರಗಳಲ್ಲಿ ಸುಗಮ ಸಂಚಾರಕ್ಕೆ ಮೆಟ್ರೋ ರೈಲುಗಳ ಹೆಚ್ಚಳಕ್ಕೆ ಮುಂದಾಗಲಾಗುವುದು ಎಂದು ತಿಳಿಸಿದರು.
ಸರಕುಗಳನ್ನು ಸಾಗಿಸಲು ನಿರ್ಮಿಸಲಾಗುತ್ತಿರುವ ರೈಲ್ವೇ ಕಾರಿಡಾರ್ ಹೊರತುಪಡಿಸಿ, ಇನ್ನೂ ಮೂರು ರೈಲ್ವೆ ಕಾರಿಡಾರ್‌ಗಳನ್ನು ನಿರ್ಮಿಸಲಾಗುವುದು.
ಇಂಧನ, ಸಿಮೆಂಟ್ ಮತ್ತು ಕಲ್ಲಿದ್ದಲು ಸಾಗಿಸಲು ಪ್ರತ್ಯೇಕ ಕಾರಿಡಾರ್ ಬಳಸಲಾಗುವುದು. ದೇಶದ ಪ್ರಮುಖ ಬಂದರುಗಳನ್ನು ಸಂಪರ್ಕಿಸುವ ಕಾರಿಡಾರ್ ಮತ್ತು ಹೆಚ್ಚು ಜನಸಂದಣಿ ಇರುವ ರೈಲ್ವೆ ಮಾರ್ಗ.
ಮೆಟ್ರೋ ಮತ್ತು ನಮೋ ಭಾರತ್ ಅಡಿಯಲ್ಲಿ ನಡೆಯುತ್ತಿರುವ ಅಸ್ತಿತ್ವದಲ್ಲಿರುವ ಯೋಜನೆಗಳನ್ನು ವಿಸ್ತರಿಸಲಾಗುವುದು. ಬಹುಮಾದರಿ ಸಂಪರ್ಕವನ್ನು ಸಕ್ರಿಯಗೊಳಿಸಲು ಈ ಯೋಜನೆಗಳನ್ನು ಪ್ರಧಾನ ಮಂತ್ರಿ ಗತಿ ಶಕ್ತಿ ಅಡಿಯಲ್ಲಿ ಗುರುತಿಸಲಾಗಿದೆ. ಇದು ಲಾಜಿಸ್ಟಿಕ್ಸ್ ವ್ಯವಸ್ಥೆಯ ದಕ್ಷತೆಯನ್ನು ಹೆಚ್ಚಿಸುತ್ತದೆ ಮತ್ತು ವೆಚ್ಚವನ್ನು ಕಡಿಮೆ ಮಾಡುತ್ತದೆ.
ಹೆಚ್ಚಿನ ಟ್ರಾಫಿಕ್ ಕಾರಿಡಾರ್‌ಗಳಲ್ಲಿ ದಟ್ಟಣೆಯನ್ನು ಕಡಿಮೆ ಮಾಡುವುದು ಪ್ರಯಾಣಿಕ ರೈಲುಗಳ ಕಾರ್ಯಾಚರಣೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಮತ್ತು ಪ್ರಯಾಣಿಕರ ಸುರಕ್ಷತೆ ಮತ್ತು ಪ್ರಯಾಣದ ವೇಗವನ್ನು ಹೆಚ್ಚಿಸುತ್ತದೆ.
ಮೀಸಲಾದ ಸರಕು ಸಾಗಣೆ ಕಾರಿಡಾರ್‌ಗಳ ಜೊತೆಗೆ ಈ ಮೂರು ಆರ್ಥಿಕ ಕಾರಿಡಾರ್ ಕಾರ್ಯಕ್ರಮಗಳು ನಮ್ಮ GDP ಬೆಳವಣಿಗೆ ದರವನ್ನು ಹೆಚ್ಚಿಸುತ್ತವೆ ಮತ್ತು ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
ಬಜೆಟ್ ಹೈಲೈಟ್ಸ್ ಈ ರೀತಿ ಇದೆ:
7 ಲಕ್ಷ ಆದಾಯ ಇರೋರಿಗೆ ತೆರಿಗೆ ವಿನಾಯಿತಿ
ಲಕ್ಷದೀಪದಲ್ಲಿ ಪ್ರವಾಸೋದ್ಯಮ ಮೂಲ ಸೌಕರ್ಯಕ್ಕೆ ಸರಕಾರ ಹಣ ವ್ಯವಸ್ಥೆ ಮಾಡಲಿದೆ.
ಗರ್ಭಕಂಠದ ಕ್ಯಾನ್ಸರ್ ತಡೆಗೆ 9-14 ವರ್ಷದ ಬಾಲಕಿಯರಿಗೆ ಉಚಿತ ಎಚ್.ಪಿ.ವಿ. ಲಸಿಕೆ
ಆಯುಷ್ಮಾನ್ ಭಾರತ್ ಯೋಜನೆಯಡಿ ಎಲ್ಲಾ ಆಾಶಾ ಕಾರ್ಯಕರ್ತೆಯರಿಗೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕರಿಗೆ ಆರೋಗ್ಯ ರಕ್ಷಣೆ ಸೇವೆ
ಮೆಟ್ರೋ ರೈಲು ಇತರ ನಗರಗಳಿಗೂ ವಿಸ್ತರಣೆ, ಎಲೆಕ್ಟ್ರಿಕಲ್ ವಾಹನಗಳಿಗೆ ಉತ್ತೇಜನ
ಜನಸಂಖ್ಯಾ ಸ್ಪೋಟ ತಡೆಗೆ ಉನ್ನತ ಅಧಿಕಾರಿಗಳ ಸಮಿತಿ ರಚನೆ
ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯುನಿಟ್ ಉಚಿತ ವಿದ್ಯುತ್