ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಕುರಿತು ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವರ ಪ್ರತಿಕ್ರಿಯೆ ಏನು  ? |  ಇಲ್ಲಿದೆ ವಿವರ

ಪುತ್ತೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಂಚಲನವನ್ನುಂಟು ಮಾಡಿದ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಕುರಿತು ಒಳ ಚರ್ಚೆಗಳು ನಡೆಯುತ್ತಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಪಕ್ಷದಲ್ಲಿ ಕೆಲವೊಂದು ಸ್ಥಾನಗಳನ್ನು ನೀಡಬೇಕು ಎಂಬ ಷರತ್ತುಗಳನ್ನು ವಿಧಿಸಿರುವ ಕುರಿತು ಈ ಹಿಂದೆ ತಾಲೂಕಿನ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು.

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ಕುರಿತು ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅವರನ್ನು ಸಂಪರ್ಕಿಸಿದಾಗ, ಅರುಣ್ ಕುಮಾರ್ ಪುತ್ತಿಲ ಸಹಿತ ಯಾರೂ ಬಿಜೆಪಿ ಸೇರುವುದಾದರೆ ಮುಕ್ತ ಅವಕಾಶವಿದೆ. ಈ ಕುರಿತು ಮಂಡಲ ಅಧ್ಯಕ್ಷನಾದ ನನಗೆ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ. ರಾಜ್ಯ, ಜಿಲ್ಲೆಯ ಹಿರಿಯ ನಾಯಕರು ಈ ಕುರಿತು ತೀರ್ಮಾನ ತೆಗೆದುಕೊಳ್ಳುತ್ತಾರೆ.































 
 

ಫೆ.5 ರಂದು ಪುತ್ತಿಲ ಪರಿವಾರದಿಂದ ಸಮಾವೇಶ ನಡೆಯಲಿದ್ದು, ಆ ಸಮಾವೇಶದಲ್ಲಿ ಬಿಜೆಪಿ ಸೇರ್ಪಡೆ ಕುರಿತು ಚರ್ಚೆಗಳು ನಡೆಯುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಸಮಾವೇಶ ಕರೆದಿರಬಹುದು ಎಂದು ಪ್ರತಿಕ್ರಿಯಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top