ಅಕ್ರಮ ವೇಶ್ಯಾವಾಟಿಕೆ ದಂಧೆ : ಮೂವರು ಪೊಲೀಸ್ ವಶಕ್ಕೆ

ಮಣಿಪಾಲ: ಅಕ್ರಮವಾಗಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರನ್ನು ಮಣಿಪಾಲ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಪವನ್, ಚೇತನ್ ಸಿ.ಬಿ. ಹಾಗೂ ಪಂಜು ಬಂಧಿತ ಆರೋಪಿಗಳು

ಮಹಿಳೆಯರನ್ನು ಪುಸಲಾಯಿಸಿ ಕರೆ ತಂದು ಅಕ್ರಮ ವೇಶ್ಯಾವಾಟಿಕೆಗೆ ಕಳುಹಿಸಿಕೊಡುತ್ತಿರುವ ಕುರಿತು ಬಂದ ಮಾಹಿತಿಯಂತೆ ಸ್ಥಳಕ್ಕೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಮೊದಲಿಗೆ ಆರೋಪಿ ಪವನ್‌ ಎಂಬವನನ್ನು ವಶಕ್ಕೆ ಪಡೆದಿದ್ದಾರೆ. ಪವನ್ ಹೇಳಿಕೆಯಂತೆ ಉಡುಪಿ ತಾಲೂಕು ಬೊಮ್ಮರಬೆಟ್ಟು ಮನೆಗೆ ದಾಳಿ ನಡೆಸಿ ಆರೋಪಿ ಚೇತನ್‌ ಸಿ.ಬಿ. ಹಾಗೂ ಆರೋಪಿ ಪಂಜು ಎಂಬವರನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.





























 
 

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top