ಬಿಜೆಪಿಯ ಭೀಷ್ಮ ಎಂದೇ ಖ್ಯಾತನಾಮರಾದ ಎಲ್.ಕೆ.ಅಡ್ವಾಣಿ ಅವರು ಪ್ರತಿಷ್ಠಿತ ‘ಭಾರತ ರತ್ನ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಘೊಷಣೆ ಮಾಡಿದ್ದು, ಲಾಲ್ ಕೃಷ್ಣ ಅಡ್ವಾಣಿ ಅವರು ಬಿಜೆಪಿ ಪಕ್ಷದ ಸಹಸಂಸ್ಥಾಪಕರಲ್ಲಿ ಒಬ್ಬರಾಗಿದ್ದಾರೆ. ಅಲ್ಲದೆ ಹಿಂದೂ ರಾಷ್ಟ್ರೀಯತಾವಾದಿ ಸ್ವಯಂಸೇವಕ ಸಂಘಟನೆಯಾದ ಆರ್.ಎಸ್.ಎಸ್.ನ ಸದಸ್ಯರೂ ಆಗಿದ್ದಾರೆ.
2002 ರಿಂದ 2004 ರ ತನಕ ಉಪಪ್ರಧಾನಿಯಾಗಿದ್ದ ಎಲ್.ಕೆ.ಅಡ್ವಾಣಿ ಅವರು, 90ರ ದಶಕದಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಹೋರಾಟ ಮಾಡಿದ ಧೀಮಂತ ನಾಯಕರಾಗಿದ್ದರು. ಲೋಕಸಭೆಯಲ್ಲಿ ದೀರ್ಘಾವಧಿವರೆಗೆ ವಿರೋಧ ಪಕ್ಷದ ನಾಯಕರಾಗಿದ್ದರು. 2009 ರಲ್ಲಿ ಲೋಕಸಭೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗಿದ್ದರು.