ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಗರ್ಭಗುಡಿಯ ದಾರಂದಕ್ಕೆ ಬೆಳ್ಳಿಯ ಕವಚ ಸಮರ್ಪಣೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಗರ್ಭಗುಡಿಯ ದಾರಂದಕ್ಕೆ ಬೆಳ್ಳಿಯ ಕವಚವನ್ನು ಪುತ್ತೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್‍ ಕುಮಾರ್‍ ಭಂಡಾರಿ ದಂಪತಿ ಹಾಗೂ ಮನೆಯವರು ಕೊಡುಗೆಯಾಗಿ ಶ್ರೀ ದೇವಸ್ಥಾನಕ್ಕೆ ಸಮರ್ಪಿಸಿದ್ದಾರೆ.

ಸುಮಾರು 8 ಕೆ.ಜಿ. ಬೆಳ್ಳಿಯನ್ನು ದಾರಂದ ಕವಚಕ್ಕೆ ಬಳಕೆ ಮಾಡಲಾಗಿದ್ದು, ದಾರಂದ ಕವಚ ಕೆಲಸ ನಿರ್ವಹಿಸಿದ ಮುಳಿಯ ಜ್ಯುವೆಲ್ಸ್ ಸಂಸ್ಥೆಯಿಂದ ಬೆಳಿಗ್ಗೆ ಮೆರವಣಿಗೆ ಮೂಲಕ ಬೆಳ್ಳಿಯ ದಾರಂದ ಕವಚವನ್ನು ದೇವಸ್ಥಾನಕ್ಕೆ ತರಲಾಯಿತು. ಬಳಿಕ ದೇವಳದ ಸತ್ಯಧರ್ಮ ನಡೆಯಲ್ಲಿಟ್ಟು ಸಮರ್ಪಣಾ ಪ್ರಾರ್ಥನೆ ಮಾಡಲಾಯಿತು. ಬಳಿಕ ದಾನಿಗಳಾದ ಶ್ರೀ ಮಹಾಲಿಂಗೇಶ್ವರ ದೇವಳದ ಹಿಂದಿನ ಕಾರ್ಯನಿರ್ವಹಣಾಧಿಕಾರಿ ಮತ್ತು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಮತ್ತು ಮನೆಯವರು ಬೆಳ್ಳಿಯ ದಾರಂದ ಕವಚವನ್ನು ಶನಿವಾರ ಸಮರ್ಪಣೆ ಮಾಡಿದರು.

ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಸ್ವಾಮೀಜಿ,, ಮಾಜಿ ಶಾಸಕ ಸಂಜೀವ ಮಠಂದೂರು, ವ್ಯವಸ್ತಾಪನಾ ಸಮಿತಿ ಸದಸ್ಯರು ಸಹಿತ ಹಲವಾರು ಮಂದಿ ಭಕ್ತರು ಉಪಸ್ಥಿತರಿದ್ದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top