ಬಂಟ್ವಾಳ: ತಾಲೂಕಿನ ಬೋಳಂತೂರು ತುಳಸೀವನ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದ ವಾರ್ಷಿಕೋತ್ಸವ ಫೆ.5 ಸೋಮವಾರ ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 6.30 ಕ್ಕೆ ಧ್ವಜಾರೋಹಣ, 7 ಕ್ಕೆ ಗಣಹೋಮ, 9 ರಿಂದ ಸಂಜೆ 4 ರ ತನಕ ವಿವಿಧ ಭಜನಾ ಮಂಡಳಿಗಳಿಂದ ಭಜನೆ, ಸಂಜೆ 4 ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, 6 ಕ್ಕೆ ಮಹಾ ಮಂಗಳಾರತಿ ನಡೆಯಲಿದೆ. ರಾತ್ರಿ 8 ಕ್ಕೆ ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ.
ರಾತ್ರಿ 8.15 ಕ್ಕೆ ಸ್ಥಳೀಯ ಮಕ್ಳಳಿಂದ ಸಾಂಸ್ಕೃತಿಕ ಕಾರ್ಯಕ್ರಮ, 9 ರಿಂದ ಬೋಳಂತೂರು ಶ್ರೀ ಸೋಮನಾಥೇಶ್ವರ ಯಕ್ಷಗಾನ ಕಲಾ ಸಂಘದ ಗಣೇಶ್ ಪಾಲೆಚ್ಚಾರ್ ಅವರ ಶಿಷ್ಯವೃಂದದಿಂದ ಪೌರಾಣಿಕ ಕಥಾಭಾಗ ‘ಶ್ರೀ ಕೃಷ್ಣ ಜನ್ಮ-ಶ್ರೀ ಕೃಷ್ಣ ಲೀಲೆ’ ಮಕ್ಕಳ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.
ಸಂಜೆ 6.15 ಕ್ಕೆ ನಡೆಯುವ ಧಾರ್ಮಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳಸೀವನ ಶ್ರೀ ಸಿದ್ಧಿವಿನಾಯಕ ಟ್ರಸ್ಟ್ ಗೌರವಾಧ್ಯಕ್ಷ ಮಹಾಬಲ ರೈ ಹೊಸಮನೆ ಬೋಳಂತೂರು ವಹಿಸಲಿದ್ದು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಧಾರ್ಮಿಕ ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ನಿವೃತ್ತ ಪ್ರಾಧ್ಯಾಪಕ ಕೆ.ಗೋವಿಂದ ಭಟ್ ಜೀವೆ ಭಾಗವಹಿಸಲಿದ್ದಾರೆ ಎಂದು ಭಜನಾ ಮಂದಿರ ಪ್ರಕಟಣೆಯಲ್ಲಿ ತಿಳಿಸಿದೆ.