ಪುತ್ತೂರು: ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ನೇತೃತ್ವದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘ ಈಶ್ವರಮಂಗಲ ವಲಯ, ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ, ಒಕ್ಕಲಿಗ ಗೌಡ ಮಹಿಳಾ ಘಟಕದ ಸಹಭಾಗಿತ್ವದಲ್ಲಿ ಮಾಡ್ನೂರು, ಬಡಗನ್ನೂರು, ನೆಟ್ಟಣಿಗೆ ಮುಡ್ನೂರು, ಪಡವನ್ನೂರು, ನಿಡ್ಪಳ್ಳಿ, ನೆಟ್ಟಣಿಗೆ ಬೆಳ್ಳೂರು ಗ್ರಾಮಗಳನ್ನೊಳಗೊಂಡ ವಲಯ ಮಟ್ಟದ ಯುವ ಕ್ರೀಡಾ ಸಂಗಮ ಪಟ್ಟೆ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಜರಗಿತು.
ಪೆರಿಗೇರಿ ಶ್ರಿ ಅಯ್ಯಪ್ಪ ಭಜನಾ ಮಂದಿರದ ಮಾಜಿ ಅಧ್ಯಕ್ಷ ಗಣಪತಿ ಗೌಡ ಕೊಡಿಯಡ್ಕ ದೀಪ ಬೆಳಗಿಸಿ ಶುಭ ಹಾರೈಸಿದರು. ಬಡಗನ್ನೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಶ್ರೀಧರ ಗೌಡ ಕನ್ನಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಗತಿಪರ ಕೃಷಿಕ ವಿಶ್ವನಾಥ ಗೌಡ ಅಡಿಲು, ಕುಂಬ್ರ ಶಾಖೆಯ ಸಮುದಾಯ ಪತ್ತಿನ ಒಕ್ಕಲಿಗ ಸಹಕಾರ ಸಂಘ ಸಲಹಾ ಸಮಿತಿ ಸದಸ್ಯ ರಾಮಣ್ಣ ಗೌಡ ಬಸವಹಿತ್ಳು. ಈಶ್ವರಮಂಗಲ ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಉಸ್ತುವಾರಿ ಲೋಕೇಶ್ ಚಾಕೋಟೆ, ಬಡಗನ್ನೂರು ಒಕ್ಕಲಿಗ ಗೌಡ ಸೇವಾ ಸಂಘ ಸಮಿತಿಯ ಗೌರವಾಧ್ಯಕ್ಷ ಚಂದ್ರಶೇಖರ ಸಾರೆಪ್ಪಾಡಿ, ಬಡಗನ್ನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಶೀಲ ವೆಂಕಪ್ಪ ಗೌಡ, ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ನೆಟ್ಟಣಿಗೆ ಮುಡ್ನೂರಿನ ಅದ್ಯಕ್ಷೆ ಕಲಾವತಿ ಎಸ್ ಗೌಡ ಪಟ್ಲಡ್ಕ ಪಾಲ್ಗೊಂಡು ಶುಭ ಹಾರೈಸಿದರು.
ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ಗೌಡ ಮೋಡಿಕೆ, ಅಧ್ಯಕ್ಷ ಜಗ್ಗನಾಥ ಪಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಧ್ಯಾ ಸಾರೆಪ್ಪಡಿ ಮತ್ತು ತಂಡ ಪ್ರಾರ್ಥಿಸಿದರು. ಈಶ್ವರಮಂಗಲ ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಜೊತೆ ಕಾರ್ಯದರ್ಶಿ ಶರತ್ ಗೌಡ ಪುಳಿತ್ತಡಿ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ದೀಪಕ್ ಮುಂಡ್ಯ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾವು ಕಾರ್ಯಕ್ರಮ ನಿರ್ವಹಿಸಿದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಪೂರ್ವ ಅಧ್ಯಕ್ಷ ನಾಗಪ್ಪ ಗೌಡ ಬೊಮ್ಮೆಟ್ಟಿ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಒಕ್ಕಲಿಗ ಗೌಡ ಸೇವಾ ಸಂಘದ ತಾಲೂಕು ಅಧ್ಯಕ್ಷ ರವಿ ಮುಂಗ್ಲಿಮನೆ, ಕೋಶಾಧಿಕಾರಿ ಶಿವರಾಮ ಮತಾವು, ತಾಲೂಕು ಮಹಿಳಾ ಸಂಘದ ವಾರಿಜಾ ಬೆಳಿಯಪ್ಪ ಗೌಡ, ಈಶ್ವರಮಂಗಲ ವಲಯ ಉಸ್ತುವಾರಿ ಲೋಕೇಶ್ ಚಾಕೋಟೆ, ನಿಡ್ಪಳ್ಳಿ ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ನಾಗೇಶ್ ಗೌಡ ಪುಳಿತ್ತಡಿ, ನಿವೃತ್ತ ಸೈನಿಕ ವಿದ್ಯಾಧರ್ ಎನ್, ಒಕ್ಕಲಿಗ ಗೌಡ ಸಂಘ ನೆಟ್ಟಣಿಗೆ ಮುಡ್ನೂರು ಗ್ರಾಮದ ಉಪಾಧ್ಯಕ್ಷ ನವೀನ್ ಕುಮಾರ್ ಪಾಲ್ಗೊಂಡು ಶುಭ ಹಾರೈಸಿದರು. ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ದಿವ್ಯಪ್ರಸಾದ್ ಎ ಯಂ, ಶ್ರೀನಿವಾಸ ಗೌಡ ಕನ್ನಯ,ಒಕ್ಕಲಿಗ ಸ್ವ ಸಹಾಯ ಸಂಘಗಳ ಬಡಗನ್ನೂರು ಒಕ್ಕೂಟ ಅಧ್ಯಕ್ಷ ಗಿರಿಯಪ್ಪ ಗೌಡ ಅಲಂತಡ್ಕ,ವಲಯದ ಗೌರವಾಧ್ಯಕ್ಷ ಲಿಂಗಪ್ಪ ಗೌಡ ಮೋಡಿಕೆ,ಅದ್ಯಕ್ಷ ಜಗ್ಗನಾಥ ಪಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯುವ ಒಕ್ಕಲಿಗ ಗೌಡ ಸೇವಾ ಸಂಘ ಮಾಡ್ನೂರು ಗ್ರಾಮ ಅಧ್ಯಕ್ಷ ಯೋಗೀಶ್ ಕಾವು ಸ್ವಾಗತಿಸಿದರು. ವಲಯದ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾವು ವಂದಿಸಿದರು. ಉಪಾಧ್ಯಕ್ಷ ಅನಿಲ್ ಕುಮಾರ್ ಕನ್ನಡ್ಕ ,ಕ್ರೀಡಾ ಕಾರ್ಯದರ್ಶಿ ಅಶ್ವಿತ್ ಮಾಡ್ಯಲಮಜಲು, ಸಾಂಸ್ಕೃತಿಕ ಕಾರ್ಯದರ್ಶಿ ಪ್ರೇಮಾನಂದ ಮೂಡಿಪಿನಡ್ಕ,ಕೋಶಾಧಿಕಾರಿ ಆಶೀರ್ವಾದ್ ಹೂಸಮನೆ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.
ಕ್ರೀಡಾ ಸಾಧಕರಿಗೆ ಸನ್ಮಾನ :
2022-23 ನೇ ಸಾಲಿನ ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರ, ರಾಜ್ಯ, ಜಿಲ್ಲೆ, ತಾಲೂಕು ಮಟ್ಟದಲ್ಲಿ ಸಾಧನೆಗೈದವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಗಣ್ಯರ ಭೇಟಿ:
ವಲಯ ಮಟ್ಟದ ಕ್ರೀಡಾಕೂಟಕ್ಕೆ ಪುತ್ತೂರು ಮಾಜಿ ಶಾಸಕ ಸಂಜೀವ ಮಠ0ದೂರು, ಪಟ್ಟೆ ವಿದ್ಯಾಸಂಸ್ಥೆ ಸಂಚಾಲಕ ನಾರಾಯಣ ಭಟ್ ಬಿರ್ನೋಡಿ, ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ನಿರ್ದೇಶಕ ಸತೀಶ್ ಪಾಂಬಾರು, ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಪೂರ್ವ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯುರು, ಯುವ ಒಕ್ಕಲಿಗ ಗೌಡ ಸೇವಾ ಸಂಘದ ತಾಲೂಕು ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ, ಪ್ರಧಾನ ಕಾರ್ಯದರ್ಶಿ ಅನಂದ ತೆಂಕಿಲ, ಪದಾಧಿಕಾರಿಗಳಾದ ಮೋಹನ್ ಕಬಕ,ಪ್ರಕಾಶ್ ಕೆಮ್ಮಾಯಿ, ವಸಂತ ನೆಕ್ಕರಾಜೆ,ತಾಲೂಕು ಮಹಿಳಾ ಘಟಕದ ಪದಾಧಿಕಾರಿ ತ್ರಿವೇಣಿ, ವಿಜಯ, ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನ ಸಲಹಾ ಸಮಿತಿ ಸದಸ್ಯ ವೆಂಕಪ್ಪ ಗೌಡ ದೇವಳಿಕೆ, ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. 400 ಕ್ಕೂ ಮಿಕ್ಕಿ ಕ್ರೀಡಾಪಟುಗಳು, ಸಮಾಜ ಬಾಂಧವರು ಭಾಗವಹಿಸಿದ್ದರು.