ಪುತ್ತೂರು: ನರಿಮೊಗರು ಗ್ರಾಮ ಪಂಚಾಯಿತಿ ಹಾಗೂ ಕಲ್ಲಾರೆ ಕಂಪಾನಿಯೋ ನೆಮ್ಮದಿ ವೆಲ್ ನೆಸ್ ಸೆಂಟರ್ ಜಂಟಿ ಆಶಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ ಫೆ. 7 ರಿಂದ ಫೆ. 21ರವರೆಗೆ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.
ಶಿಬಿರದ ಅಂಗವಾಗಿ ಬೆಳಿಗ್ಗೆ 9.30 ರಿಂದ ಸಂಜೆ 4.30 ರ ತನಕ ಪ್ರತಿದಿನ ಯಾವುದೇ ರೀತಿಯ ಔಷಧವಿಲ್ಲದೆಯೇ ರಕ್ತ ಸಂಚಾರ ಮತ್ತು ನರ ಸಂಬಂಧಿತ ಕಾಯಿಲೆಗಳಿಗೆ ಉಚಿತ ಥೆರಪಿ ನಡೆಯಲಿದೆ.
ಫೆ.7 ರಂದು ಶಿಬಿರದ ಉದ್ಘಾಟನೆಯನ್ನು ನರಿಮೊಗರು ಪಂಚಾಯಿತಿ ಅಧ್ಯಕ್ಷೆ ಹರಿಣಿ ಪಂಜಳ ನೆರವೇರಿಸುವರು. ಕಲ್ಲಾರೆ ನೆಮ್ಮದಿ ವೆಲ್ ನೆಸ್ ಸೆಂಟರ್ ನ ಮುಖ್ಯಸ್ಥ ಕೆ. ಪ್ರಭಾಕರ ಸಾಲ್ಯಾನ್ ಶಿಬಿರದ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ನರಿಮೊಗರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಉಮೇಶ್ ಎಂ, ಇಂದಿರಾನಗರ, ಅಭಿವೃದ್ಧಿ ಅಧಿಕಾರಿ ರವಿಚಂದ್ರ ಭಾಗವಹಿಸಲಿರುವರು. ಸಾರ್ವಜನಿಕರು ಈ ಉಚಿತ ಥೆರಪಿಯ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮುಖ್ಯಸ್ಥ ಕೆ. ಪ್ರಭಾಕರ ಸಾಲ್ಯಾನ್ ತಿಳಿಸಿದ್ದಾರೆ.