ರಾಷ್ಟ್ರೀಯ ಹೆದ್ದಾರಿ-73 ರ ಮಂಗಳೂರು-ಮೂಡಿಗೆರೆ-ತುಮಕೂರು ವಿಭಾಗದ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ 10.8 ಕಿ.ಮೀ.ಉದ್ದದ ಪೇವ್ದ್ ಶೋಲ್ಡರ್ ನೊಂದಿಗೆ ದ್ವಿಪಥ ರಸ್ತೆಯಾಗಿ ಅಗಲೀಕರಣ ಕಾಮಗಾರಿಗೆ ಇಪಿಸಿ ಆಧಾರದಲ್ಲಿ ಅನುಮೋದನೆ ನೀಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವುದಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ.
2023-24ನೇ ಸಾಲಿನ ವಾರ್ಷಿಕ ಯೋಜನೆಯಡಿ ಸುಮಾರು 343.74 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ರಸ್ತೆ ಬಳಕೆದಾರರಿಗೆ ಉತ್ತಮ ರಸ್ತೆ ಸಂಪರ್ಕ ಒದಗಿಸಲಿದ್ದು, ಜಿಲ್ಲೆಯ ಆರ್ಥಿಕ ಬೆಳವಣಿಗೆಗೆ ಅಗತ್ಯ ಬೆಂಬಲ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.
ಜಿಲ್ಲೆಗೆ ಮಹತ್ವದ ಹೆದ್ದಾರಿ ಯೋಜನೆಗಳನ್ನು ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಗೂ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಕೃತಜ್ಞತೆ ಸಲ್ಲಿಸಿದ್ದಾರೆ.