ಅಡ್ಯನಡ್ಕ : ಕರ್ನಾಟಕ ಬ್ಯಾಂಕ್ ಗೆ ಕಳ್ಳರು ನುಗ್ಗಿ ಕೋಟ್ಯಾಂತರ ಮೌಲ್ಯದ ನಗ-ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕು ಪಡೆದುಕೊಂಡಿದ್ದು, ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
ಬ್ಯಾಂಕ್‌ಗೆ ನಿನ್ನೆ ರಾತ್ರಿ ದರೋಡೆಕೋರರು ಒಳನುಗ್ಗಿದ್ದು, ಇಂದು ಮುಂಜಾನೆ ಎಂದಿನಂತೆ ಬ್ಯಾಂಕ್ ಸಿಬ್ಬಂದಿ ಬ್ಯಾಂಕ್ ತೆರೆದು ಒಳಗೆ ಹೋದಾಗ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಬಂದು ತನಿಖೆ ನಡೆಸಿದ್ದಾರೆ.
ಘಟನೆ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಎಸ್. ಪಿ. ರಿಷ್ಯಂತ್ ಮಾತನಾಡಿ, ಬುಧವಾರ ತಡರಾತ್ರಿ ವಿಟ್ಲ ಸಮೀಪದ ಅಡ್ಯನಡ್ಕದಲ್ಲಿ ಕರ್ನಾಟಕ ಬ್ಯಾಂಕ್‌ನಲ್ಲಿ ಲಾಕರ್ ಮುರಿದು ನಗ-ನಗದು ಕಳವಾಗಿದೆ. ಇದೀಗ ವಿಧಿವಿಧಾನ ತಜ್ಞರು ತನಿಖೆ ಮುಂದುವರೆಸಿದ್ದಾರೆ. ಬ್ಯಾಂಕಿನ ಭದ್ರತಾ ಸಿಸ್ಟಮ್ ತುಂಬಾ
ದುರ್ಬಲವಾಗಿದೆ. ಲಾಕರ್ ಫೆಸಿಲಿಟಿಗಳೆಲ್ಲವೂ ತುಂಬಾ ಭದ್ರವಾಗಿರಬೇಕು. ಇದಕ್ಕೆ ಬೇಕಾದಂತಹ ಎಲ್ಲಾ ವ್ಯವಸ್ಥೆಗಳನ್ನು ಎಲ್ಲಾ ಬ್ಯಾಂಕ್‌ಗಳು ಮಾಡಬೇಕು. ಬ್ಯಾಂಕಿನ ಹಿಂದಿನ ಕಿಟಕಿಯ ರಾಡನ್ನು ಎಕ್ಸೆರ್ ಬ್ಲೇಡ್ ಮೂಲಕ ಮುರಿದು ಒಳನುಗ್ಗಿದ ದರೋಡೆಕೋರರು ಬ್ಯಾಂಕ್‌ನ ಲಾಕರ್‌ನ್ನು ಗ್ಯಾಸ್ ಕಟ್ಟರ್ ಉಪಯೋಗಿಸಿ ಲಾಕರ್ ಮುರಿದಿದ್ದಾರೆ ಎಂದು ಹೇಳಿದ್ದಾರೆ.