ಪುತ್ತೂರು: ನಗರದ ಹೊರವಲಯದ ಪಡೀಲ್ ವಿಜಯನಗರ ಬಡಾವಣೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ವಿಜಯನಗರ ಬಡಾವಣೆ ನಿವಾಸಿ ಶಾಂಭವಿ ನಾಯ್ಕ್ ಅವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ಬೆಂಕಿಯಿಂದಾಗಿ ಅಡಿಕೆ ಹಾಗೂ ಅಪಾರ ವಸ್ತುಗಳು ಸುಟ್ಟು ಹೋಗಿ ನಷ್ಟ ಉಂಟಾಗಿದೆ.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಮೆಸ್ಕಾಂ ಅಧಿಕಾರಿಗೆ ಕರೆ ಮಾಡಿ ತಕ್ಷಣ ಸ್ಥಳಕ್ಕೆ ಬರುವಂತೆ ಸೂಚಿಸಿದರು..ಯುವರಾಜ್ ಪೆರಿಯಾತ್ತೋಡಿ, ನಗರಸಭಾ ಸದಸ್ಯೆ ಮೋಹಿನಿ ವಿಶ್ವನಾಥ ಬನ್ನೂರು, ರಾಮ್ ದಾಸ್ ಹಾರಾಡಿ ಹಾಗೂ ಪಕ್ಷದ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು