ಮಂಗಳೂರಿಗೆ ಸಿಜಿಎಚ್‍ಎಸ್  ವೆಲ್ ನೆಸ್ ಸೆಂಟರ್ ಮಂಜೂರು : ಸಂಸದ ನಳೀನ್ ಕುಮಾರ್ ಮನವಿಗೆ ಸ್ಪಂದಿಸಿದ ಆರೋಗ್ಯ ಸಚಿವರು

ಮಂಗಳೂರು: ಕೇಂದ್ರ ಸರ್ಕಾರದ ನಿವೃತ್ತ ನೌಕರರ ಬಹುದಿನದ ಬೇಡಿಕೆಯಾದ ಸಿಜಿಎಚ್‍ಎಸ್ ವೆಲ್ ನೆಸ್ ಸೆಂಟರ್ ನ್ನು ಮಂಗಳೂರಿನಲ್ಲಿ ತೆರೆಯಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಸಂಸದ ನಳೀನ್ ಕುಮಾರ್ ಅವರ ಪ್ರಯತ್ನದಿಂದ ಬಹುದಿನದ ಬೇಡಿಕೆ ಈಡೇರುತ್ತಿದ್ದು, ಸಂಸದರು ಕಳೆದ ಬಾರಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ಮಂಗಳೂರಿನಲ್ಲಿ ಸಿಜಿಎಚ್‍ಎಸ್ ವೆಲ್ ನೆಸ್ ಸೆಂಟರ್ ನ್ನು ತೆರೆಯುವಂತೆ ಮನವಿ ಮಾಡಿದ್ದರು.  ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಮನ್ ಸುಖ್ ಮಾಂಡವೀಯರವರು ನಳೀನ್ ಕುಮಾರ್ ರವರಿಗೆ ಪತ್ರ ಬರೆದು ಮಂಗಳೂರು ಸೇರಿದಂತೆ ದೇಶದ 20 ನಗರಗಳಲ್ಲಿ ಸಿಜಿಎಚ್‍ಎಸ್ ವೆಲ್ ನೆಸ್ ಸೆಂಟರ್ ಗಳನ್ನು ತೆರೆಯುತ್ತಿರುವುದಾಗಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಹಾಗೂ ನೆರೆಯ ಜಿಲ್ಲೆಗಳ 50ಕ್ಕೂ ಅಧಿಕ ಕೇಂದ್ರ ಸರ್ಕಾರದ ಇಲಾಖೆಗಳ ಸುಮಾರು 5500 ಉದ್ಯೋಗಿಗಳಿದ್ದು, 29000 ಕ್ಕೂ ಅಧಿಕ ನಿವೃತ್ತ ಕೇಂದ್ರ ಸರ್ಕಾರದ ಉದ್ಯೋಗಿಗಳಿದ್ದಾರೆ. ಮಂಗಳೂರಿನಲ್ಲಿ ಈ ಕೇಂದ್ರ ಪ್ರಾರಂಭವಾಗುವುದರಿಂದ  ಅವರು ನಿಯಮಾನುಸಾರ ವೈದ್ಯಕೀಯ ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತದೆ. ತಮ್ಮ ಮನವಿಯನ್ನು ಪುರಸ್ಕರಿಸಿ ಮಂಗಳೂರಿಗೆ ಸಿಜಿಎಚ್‍ಎಸ್ ವೆಲ್ ನೆಸ್ ಸೆಂಟರ್ ನ್ನು ಮಂಜೂರು ಮಾಡಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ  ಡಾ. ಮನ್ ಸುಖ್ ಮಾಂಡವೀಯರವರಿಗೆ ಸಂಸದರು ಕೃತಜ್ಞತೆ ಸಲ್ಲಿಸಿದ್ದಾರೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top