ಪುತ್ತೂರು: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ವತಿಯಿಂದ ಸಾಹಿತ್ಯ ಸಂಜೆ ಫೆ.18 ಭಾನುವಾರ ಉಪ್ಪಿನಂಗಡಿ ಪಂಜಳ ಸುಧಾಮ ಮನೆಯಂಗಳದ ಮಣಿಮಂಟಪ ಸಭಾಂಗಣದಲ್ಲಿ ನಡೆಯಲಿದೆ.
18ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸವಿ ನೆನಪಿನ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮವಾಗಿದ್ದು, ಉಪ್ಪಿನಂಗಡಿ ಹೋಬಳಿ ಘಟಕದ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ ನಡೆಯಲಿದೆ. ಸ್ವಾತಿ ಎನ್.ಎಸ್. ಅವರಿಂದ ಗೀತ ಗುಂಜನ, ಹಿರಿಯ ವಿದ್ವಾಂಸ ಲಕ್ಷ್ಮೀಶ ತೋಳ್ಪಾಡಿ ಅವರಿಂದ ಮಹಾಭಾರತ ಅನುಸಂಧಾನ ಪ್ರಸ್ತುತಗೊಳ್ಳಲಿದೆ.
ಹಿರಿಯ ವಿದ್ವಾಂಸ ಡಾ.ತಾಳ್ತಜೆ ವಸಂತ ಕುಮಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ದ.ಕ.ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ‘ಮಹಾಭಾರತ ಅನುಸಂಧಾನ’ ವಿಷಯದ ಕುರಿತು ಉಪನ್ಯಾಸ ನೀಡುವರು. ಹಿರಿಯ ಸಾಹಿತಿ ಡಾ.ವರದರಾಜ ಚಂದ್ರಗಿರಿ ಕೃತಿ ಪರಿಚಯ ಮಾಡುವರು. ಕಸಾಪ ತಾಲೂಕು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಗೌರವ ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಭಿಮಾನಿಗಳು ಪಾಲ್ಗೊಳ್ಳುವಂತೆ ಸಾಹಿತ್ಯ ಪರಿಷತ್ ಪ್ರಕಟಣೆಯಲ್ಲಿ ತಿಳಿಸಿದೆ.