ಪುತ್ತೂರು: ಹಿರಿಯ ವಿದ್ವಾಂಸರು, ವಿಮರ್ಶಕರೂ ಆಗಿರುವ ಲಕ್ಷ್ಮೀಶ ತೋಳ್ಪಾಡಿ ಅವರ ‘ಮಹಾಭಾರತ ಅನುಸಂಧಾನ ಭಾರತ ಯಾತ್ರೆ’ ಕೃತಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮನ್ನು ಆಯೋಜಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಮಾಲೋಚನಾ ಸಭೆ ಫೆ.15 ಗುರುವಾರ 4 ಗಂಟೆಗೆ ಅನುರಾಗ ವಠಾರದಲ್ಲಿ ನಡೆಯಲಿದೆ.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ, ಹಿರಿಯ ಸಾಹಿತಿ ಪುರಂದರ ಭಟ್ ಅವರ ನೇತೃತ್ವದಲ್ಲಿ ಸಮಾಲೋಚನಾ ಸಭೆ ನಡೆಯಲಿದೆ.
ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಲಭಿಸಿದ ಪ್ರಶಸ್ತಿ ಕೇವಲ ಪುತ್ತೂರಿಗೆ ಮಾತ್ರವಲ್ಲದೆ ಸಮಸ್ತ ಕನ್ನಡಿಗರಿಗೆ ಹಾಗೂ ಕರ್ನಾಟಕ ರಾಜ್ಯಕ್ಕೆ ಸಂದ ಗೌರವವಾಗಿದೆ. ಆದ್ದರಿಂದ ಈ ಅಭಿನಂದನಾ ಕಾರ್ಯಕ್ರಮವನ್ನು ಯಶಸ್ವಿಯಾಗಿಸುವ ನಿಟ್ಟಿನಲ್ಲಿ ಕನ್ನಡ ಅಭಿಮಾನಿಗಳು, ಸಂಘ-ಸಂಸ್ಥೆಗಳು ಹಾಗೂ ಶ್ರೀ ಲಕ್ಷ್ಮೀಶ ತೋಳ್ಪಾಡಿ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುತ್ತೂರು ಉಮೇಶ್ ಮನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.