ಕಡಬ: ಎಲ್ಲಾ ಸಮುದಾಯದ ಜತೆಗೂಡಿ ಒಬ್ಬರಿಗೊಬ್ಬರು ಸಹಕಾರ ನೀಡುವ ನಿಟ್ಟಿನಲ್ಲಿ ರಚನೆಗೊಂಡ ಸ್ಪಂದನಾ ಸಮುದಾಯ ಸಹಕಾರ ಸಂಘ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ಸಹಕಾರ ಸಂಘವಾಗಿ ಬೆಳೆಯಲಿ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಅವರು ಭಾನುವಾರ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಕಡಬ ಸ್ಪಂದನಾ ಸಮುದಾಯ ಸಹಕಾರ ಸಂಘದ ಶುಭಾರಂಭ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಒಳ್ಳೆಯ ಕೆಲಸ ಮಾಡಿದಾಗ ಸಮಾಜದಿಂದ ಸನ್ಮಾನ ಪಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಹಿರಿಯರು ಮಾಡುವ ಒಳ್ಳೆಯ ಕೆಲಸವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸ ನಡೆಯಬೇಕು. ಆಗ ಆತ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯ ಎಂದ ಅವರು, ಕಷ್ಟದಲ್ಲಿರುವವರಿಗೆ ಸಹಕಾರ ಸಂಘದ ಸಾಲ ನೀಡುತ್ತದೆ. ಹಾಗೆಯೇ ಆ ಸಾಲವನ್ನು ಕ್ಲಪ್ತ ಸಮಯದಲ್ಲಿ ತೀರಿಸುವ ಮನೋಭಾವವನ್ನು ಸಾಲ ಪಡೆದುಕೊಂಡವರು ಹೊಂದಿರಬೇಕು. ಹಾಗಾದಲ್ಲಿ ಸಾಲ ಪಡೆದುಕೊಂಡವರು ಸಹಿತ ಸಹಕಾರ ಸಂಘ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಭಾಗೀರಥಿ ಮುರುಳ್ಯ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಸ್ಪಂದನಾ ಸಮುದಾಯ ಸಹಕಾರ ಸಂಘದ ಅಧ್ಯಕ್ಷ ಕೇಶವ ಅಮೈ ಕಲಾಯಿಗುತ್ತು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ರಾಜ್ಯ ಕೆಪಿಸಿಸಿ ಸದಸ್ಯ ಜಿ.ಕೃಷ್ಣಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೃಷ್ಣ ಶೆಟ್ಟಿ ಕಡಬ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಶೆಟ್ಟಿ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಕಡಬ ಶಾಖಾ ವ್ಯವಸ್ಥಾಪಕಿ ಅಮಿತಾ ಶೆಟ್ಟಿ, ಕಡಬ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ, ಸುದರ್ಶನ ಗೌಡ ಕೋಡಿಂಬಾಳ, ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಡಬ ಶಾಖೆ ಸಲಹಾ ಸಮಿತಿ ಅಧ್ಯಕ್ಷ ಗಣೇಶ್ ಕೈಕುರೆ, ತುಮಕೂರು ಸೀನಿಯರ್ ಸಿವಿಲ್ ಜಡ್ಜ್ ನೂರುನ್ನೀಸಾ ಪಾಲ್ಗೊಂಡು ಶುಭ ಹಾರೈಸಿದರು. ವೇದಿಕೆಯಲ್ಲಿ ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಸ್ಥಾಪಕಾಧ್ಯಕ್ಷ ಸುರೇಶ್ ಬೈಲು, ಸ್ಪಂದನಾ ಸಮುದಾಯ ಸಹಕಾರ ಸಂಘದ ಉಪಾಧ್ಯಕ್ಷ ಚೇತನ್ ಆನೆಗುಂಡಿ, ಸಂಘದ ನಿರ್ದೇಶಕರಾದ ಚಂದ್ರಶೇಖರ ಸಣ್ಣಾರ, ಶೇಖರ ಗೌಡ ಕೆ., ನಾಗೇಶ್ ಕೆಡೆಂಜಿ, ರೋಹಿತ್ ಎಚ್.ಎಚ್., ಗೋಪಾಲ ಎಣ್ಣೆಮಜಲು, ಪಿ.ಕಾಂತಪ್ಪ ಗೌಡ, ಹಿರಿಯಣ್ಣ ಗೌಡ, ಆಶಾ ತಿಮ್ಮಪ್ಪ ಗೌಡ, ದಾಮೋದರ ಪಿ., ಗೌರವ ಸಲಹೆಗಾರರಾದ ಚಂದ್ರಶೇಖರ ಗೌಡ ಕೋಡಿಬೈಲು, ಕೃಷ್ಣಪ್ಪ ಗೌಡ ಕೆಂಜಾಳ ಉಪಸ್ಥಿತರಿದ್ದರು.