ನಾಳೆ(ಫೆ.15-17): ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೆ, ದೈವಗಳ ನೇಮೋತ್ಸವ

ಪುತ್ತೂರು: ಶಾಂತಿಗೋಡು ಗ್ರಾಮದ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವವು ಫೆ.15 ರಿಂದ ಫೆ.17 ರ ತನಕ ವಿವಿಧ ವೈದಿಕ, ತಾಂತ್ರಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಪುತ್ತೂರಿನಿಂದ ಸುಮಾರು 13 ಕಿ.ಮೀ. ದೂರದಲ್ಲಿರುವ ವೀರಮಂಗಲ ಕ್ಷೇತ್ರವು ಪ್ರಾಚೀನ ಕಾಲದಲ್ಲಿ ನಿತ್ಯಮಂಗಲ ಎಂಬ ಹೆಸರನ್ನು ಪಡೆದಿತ್ತು. ತದನಂತರ ಬಲ್ಲಾಳ ಮನೆತನದ ವೀರಮ್ಮ ಬಳ್ಳಾಲ್ತಿಯ ಶೌರ್ಯದ ಪ್ರತೀಕವಾಗಿ ವೀರಮಂಗಲವಾಯಿತೆಂಬ ಇತಿಹಾಸವಿದೆ. ಈ ಊರಿನ ಭಕ್ತರ ಭಕ್ತಿಯ ಪ್ರತೀಕವಾಗಿ ಪುಣ್ಯವಾಹಿನಿ ಕುಮಾರಧಾರ ನದಿ ತಟದಲ್ಲಿ ಕಂಗೊಳಿಸುವ ಪವಿತ್ರ ಕ್ಷೇತ್ರವಾಗಿದೆ. ಪುತ್ತೂರು ಮಹಾಲಿಂಗೇಶ್ವರ ದೇವರು ಅವಭೃತ ಸ್ನಾನಕ್ಕೆ ತೆರಳುವ ಸಂದರ್ಭದಲ್ಲಿ ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವರನ್ನು ಭೇಟಿಯಾಗಿ ನದಿಯಲ್ಲಿ ಅವಭೃತ ಸ್ನಾನ ನಡೆಸುವುದು ಇಲ್ಲಿನ ಪುರಾತನ ಸಂಪ್ರದಾಯವಾಗಿದೆ. ಹರಿಹರರು ಒಂದಾಗಿ ಭಕ್ತರನ್ನು ಹರಸುವ ಈ ಪುಣ್ಯಕ್ಷೇತ್ರ ವೀರಮಂಗಲದ ಪುಣ್ಯಭೂಮಿಯಾಗಿದೆ.

ಜಾತ್ರೋತ್ಸವದಲ್ಲಿ ಫೆ.15 ರಂದು ಬೆಳಿಗ್ಗೆ ಕುಮಾರಧಾರ ನದಿಯಲ್ಲಿ ಗಂಗಾ ಪೂಜೆ, ಕಲಶ ಜಲ ಮೆರವಣಿಗೆ, ರಾತ್ರಿ ದೇವರಿಗೆ ರಂಗ ಪೂಜೆ ನಡೆಯಲಿದೆ. ಫೆ. 16 ರಂದು ಪೂರ್ವಾಹ್ನ ಗಣಹೋಮ, ಸೀಯಾಳಾಭಿಷೇಕ, ಪವಮಾನಾಭಿಷೇಕ, ನವಕ ಕಲಶಾಭಿಷೇಕ, ಶ್ರೀ ಮಹಾವಿಷ್ಣು ಭಜನಾ ಮಂಡಳಿ ಮುಗೇರು ಸವಣೂರು ಇವರಿಂದ ಭಜನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆದು ಸಂಜೆ ದೈವಗಳ ಭಂಡಾರ ತೆಗೆಯುವುದು, ಬಳಿಕ ವೀರಮಂಗಲ ಪಿ. ಎಂ. ಶ್ರೀ ಸ. ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಸಂಭ್ರಮ ನಡೆಯಲಿದೆ. ರಾತ್ರಿ ದೇವರ ಉತ್ಸವ ದರ್ಶನ ಬಲಿ, ಬಟ್ಟಲು ಕಾಣಿಕೆ, ಅನ್ನಸಂತರ್ಪಣೆ, ಉಳ್ಳಾಕುಲು, ಹುಲಿಭೂತ, ಕೊಡಮಣಿತ್ತಾಯ, ಅಂಙಣ ಪಂಜುರ್ಲಿ ದೈವಗಳ ನೇಮ ನಡೆಯಲಿದೆ. ಫೆ. 17 ರಂದು ಬೆಳಿಗ್ಗೆ ಶ್ರೀ ರಕ್ತೇಶ್ವರಿ, ಶಿರಾಡಿ ರಾಜನ್ ದೈವ, ಗುಳಿಗ ದೈವಗಳ ನೇಮೋತ್ಸವ ನಡೆಯಲಿದೆ.































 
 

ಫೆ.23 ದೊಂಪದ ಬಲಿ:

ಫೆ.23 ರಂದು ರಾತ್ರಿ ಭಂಡಾರ ತೆಗೆದು ಫೆ. 24 ರಂದು ಬೆಳಿಗ್ಗೆ ವೀರಮಂಗಲ ಶ್ರೀ ಶಿರಾಡಿ ರಾಜನ್ ದೈವದ ದೊಂಪದ ಬಲಿ ನೇಮೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಉತ್ಸವ ಸಮಿತಿ ಅಧ್ಯಕ್ಷ ಶಿವರಾಮ ಭಟ್ ಬಾವ, ವಿಶ್ವಸ್ಥ ಮಂಡಳಿ ಅಧ್ಯಕ್ಷ ಉಮೇಶ್ ಕೋಡಿಬೈಲು ಹಾಗೂ ಅರ್ಚಕ ರಾಧಾಕೃಷ್ಣ ಶಗ್ರಿತ್ತಾಯ ಹಾಗೂ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top