ಪುತ್ತೂರು: ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರುಗಳ ನಿಯೋಜನೆಗಾಗಿ ಆರೋಗ್ಯ ಸಚಿವರು ಆದೇಶ ನೀಡಿದ್ದಾರೆ.
ಬಂಟ್ವಾಳ ತಾಲೂಕು ವ್ಯಾಪ್ತಿಯ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆಯಿದ್ದು ಕೇವಲ ಒಬ್ಬರೇ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಈ ಕುರಿತು ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಹೆಚ್ಚುವರಿ ವೈದ್ಯರನ್ನು ನೇಮಿಸುವಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಿದ್ದರು.
ಆರೋಗ್ಯ ಕೇಂದ್ರದ ವೈದ್ಯರ ಕೊರತೆ ಬಗ್ಗೆ ಶಾಸಕರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗಮನಕ್ಕೆ ತಂದಿದ್ದರು. ಶಾಸಕರ ಮನವಿಯನ್ನು ಪರಿಗಣಿಸಿದ ಆರೋಗ್ಯ ಸಚಿವರು ವಾರದಲ್ಲಿ ಎರಡೆರಡು ದಿನಗಳಂತೆ ಹತ್ತಿರದ ಆಸ್ಪತ್ರೆಯಿಂದ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳ ತಜ್ಞರನ್ನು ಹೆಚ್ಚುವರಿ ಸೇವೆಗೆ ನಿಯೋಜನೆ ಮಾಡುವಂತೆ ಆದೇಶಿಸಿದ್ದಾರೆ. ಜೊತೆಗೆ ಒಬ್ಬರು ಅರಿವಳಿಕೆ ತಜ್ಞರನ್ನು ನಿಯೋಜನೆ ಮಾಡುವಂತೆಯೂ ಆದೇಶಿಸಿದ್ದಾರೆ.