ಮಾ.3-4: ಕರ್ಮಲ ಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ, ಪ್ರತಿಷ್ಠಾ ವರ್ಧಂತಿ

ಪುತ್ತೂರು: ಬನ್ನೂರು ಗ್ರಾಮದ ಕರ್ಮಲ ಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ಹಾಗೂ ಪ್ರತಿಷ್ಠಾವರ್ಧಂತಿ ಮಾ.3 ಹಾಗೂ 4 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಅನುಗ್ರಹದೊಂದಿಗೆ ಮಾ.3 ಭಾನುವಾರ ವೇ. ಮೂ. ಮಿತ್ತೂರು ತಿರುಮಲೇಶ್ವರ ಭಟ್ಟರ ನೇತೃತ್ವದಲ್ಲಿ ಮೂಡಪ್ಪಸೇವೆ ನಡೆಯಲಿದೆ. ಸಂಜೆ 4 ರಿಂದ ಸಾಂಸ್ಕೃತಿಕ ಹಾಗೂ ಸಭಾ ಕಾರ್ಯಕ್ರಮ, ರಾತ್ರಿ 7 ರಿಂದ ಸಂಕಲ್ಪ, ಮೂಡಪ್ಪ ಸಮರ್ಪಣೆ, ರಾತ್ರಿ 9 ರಿಂದ ರಂಗಪೂಜೆ, ಕಲ್ಪೋಕ್ತ ಪೂಜೆ, ಸರ್ವಾಲಂಕಾರ ಪೂಜೆ, ಅಷ್ಟಾವಧಾನ ಸೇವೆ, ಪ್ರಸಾದ ವಿತರಣೆ ನಡೆಯಲಿದೆ.

ಮಾ.4 ಸೋಮವಾರ ಬೆಳಗ್ಗೆ 7 ರಿಂದ ಉಷಃ ಪೂಜೆ, ಮೂಡಪ್ಪ ಉತ್ಥಾನ, ಕಲ್ಪೋಕ್ತ ಪೂಜೆ, ಮೂಡಪ್ಪ ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top