ಬೆಂಗಳೂರು: ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುವುದು ಅಸಾಧ್ಯ. ಹೀಗೆಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಚರ್ಚೆಗೆ ಕಾರಣವಾಗಿದ್ದಾರೆ.
ತನ್ನ ಸರಕಾರದಲ್ಲೂ ಭ್ರಷ್ಟಾಚಾರ ಇದೆ ಎಂಬುದನ್ನು ಸಿದ್ಧರಾಮಯ್ಯ ಒಪ್ಪಿಕೊಂಡಂತಾಗಿದೆ ಎಂದು ಹಲವರು ಈ ಹೇಳಿಕೆಯನ್ನು ವಿಶ್ಲೇಷಿಸಿದ್ದಾರೆ.
ಭ್ರಷ್ಟಾಚಾರದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ಧರಾಮಯ್ಯ, ಭ್ರಷ್ಟಾಚಾರ ಇಲ್ಲ ಎಂದು ಯಾರು ಹೇಳಿದರು? ಭ್ರಷ್ಟಾಚಾರ ಮುಕ್ತವಾಗುವುದು ಅಸಾಧ್ಯ. ಎಲ್ಲದರಲ್ಲೂ ಕಪ್ಪುಕುಳಗಳು ಇದ್ದೇ ಇರುತ್ತವೆ, ಆದರೆ ಅಂತಹದ್ದನ್ನು ಗುರುತಿಸಿ, ಶಿಕ್ಷಿಸಲಾಗುತ್ತದೆ ಎಂದಿದ್ದಾರೆ.
ಬಿಜೆಪಿ ಭ್ರಷ್ಟಾಚಾರ ಮಾಡಿದೆ, ಶೇ.40 ಕಮಿಷನ್ ಎಂದೆಲ್ಲ ಆರೋಪಗಳನ್ನು ಮಾಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರಕಾರ ಆರಂಭದಿಂದಲೇ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದೆ. ಹಲವು ಕಾಂಗ್ರೆಸ್ ಸಚಿವರ ಮೇಲೆಯೇ ನೇರ ಭ್ರಷ್ಟಾಚಾರ ಆರೋಪ ಮಾಡಲಾಗಿತ್ತು. ಸಿದ್ಧರಾಮಯ್ಯನವರ ಪುತ್ರ ಯತೀಂದ್ರ ಮೇಲೂ ವರ್ಗಾವಣೆ ದಂಧೆ ಆರೋಪ ಇದೆ. ಕೆಲದಿನಗಳ ಹಿಂದೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಯ್ಯನವರು ಕಾಂಗ್ರೆಸ್ ಸರಕಾರದಲ್ಲೂ ಅಧಿಕಾರಿಗಳ ಶೇ.40 ಕಮಿಷನ್ ಕೇಳುತ್ತಿದ್ದಾರೆ ಎಂಬ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿಸಿದ್ಧರಾಮಯ್ಯನವರ ಹೇಳಿಕೆಯನ್ನು ವಿಶ್ಲೇಷಿಸಲಾಗುತ್ತದೆ.