ಉಪ್ಪಿನಂಗಡಿ: ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಉಪ್ಪಿನಂಗಡಿ ಹೋಬಳಿ ಘಟಕದ ಅಧ್ಯಕ್ಷ ಕರುಣಾಕರ ಸುವರ್ಣ ಹಾಗೂ ಇತರ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ ಹಿರಿಯ ಸಾಹಿತಿ ಡಾ. ತಾಳ್ತಜೆ ವಸಂತ್ ಕುಮಾರ್ ಅವರ ಮನೆಯ ಮಣಿ ಮಂಟಪದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ‘ಮಹಾಭಾರತ ಅನುಸಂಧಾನ’ ಕುರಿತು ದತ್ತಿ ನಿಧಿ ಉಪನ್ಯಾಸವನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶ್ರೀ ಲಕ್ಷ್ಮೀಶ ತೋಳ್ಪಾಡಿ ಅವರು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಶ್ರೀ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಕನ್ನಡದ ಪೇಟ, ಶಾಲು ಹಾಗೂ ಪುಸ್ತಕ ನೀಡಿ ಅಭಿನಂದಿಸಲಾಯಿತು.