ಮುಂದಿನ ಲೋಕಸಭಾ ಚುನಾವಣೆಗೆ ದೇಶದ 60 ಕಡೆಗಳಲ್ಲಿ ಸ್ಪರ್ಧೆ | ಪತ್ರಿಕಾಗೋಷ್ಠಿಯಲ್ಲಿ ಎಸ್‍. ಡಿ. ಪಿ. ಐ. ಪಕ್ಷದ ಇಬ್ರಾಹಿಂ ಸಾಗರ್

ಪುತ್ತೂರು: ಎಸ್‍.ಡಿ.ಪಿ.ಐ. ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾರ್ಯಕರ್ತರ ಸಮಾವೇಶ ಫೆ.20 ರಂದು ಸಂಜೆ 7 ಗಂಟೆಗೆ ಪುತ್ತೂರು ಲಯನ್ಸ್ ಕ್ಲಬ್‍ ಸಭಾಂಗಣದಲ್ಲಿ ನಡೆಯಲಿದೆ ಎಂದು ಎಸ್‌. ಡಿ. ಪಿ. ಐ. ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಇಬ್ರಾಹಿಂ ಸಾಗ‌ರ್ ತಿಳಿಸಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಸಕ್ತ ದೇಶದಲ್ಲಿ ಸಂವಿಧಾನ ವಿರೋಧಿ ಆಡಳಿತದಿಂದಾಗಿ ಪ್ರಜಾಪ್ರಭುತ್ವವು ಅಪಾಯದತ್ತ ಸಾಗುತ್ತಿರುವುದಲ್ಲದೆ ಪ್ರಸಕ್ತ ರಾಜ್ಯ ಸರಕಾರವು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ ಸಮಾಜದಲ್ಲಿ ತಾರತಮ್ಯ ನೀತಿಯನ್ನು ಅನುಸರಿಸುತ್ತಾ ಬರುತ್ತಿದ್ದು ಪಕ್ಷದ ಕಾರ್ಯಕರ್ತರನ್ನು ಹಾಗೂ ದೇಶದ ಬಹು ಸಮಾಜವನ್ನು ಎಚ್ಚರಗೊಳಿಸುವ ನಿಟ್ಟಿನಲ್ಲಿ ಈ ಸಮಾವೇಶ ನಡೆಯಲಿದೆ ಎಂದು ತಿಳಿಸಿದ ಅವರು, ಸೋಶಿಯಲ್ ಡೆಮಾಕ್ರಟಿಕ್ ಪಕ್ಷ ಕಾರ್ಯಕರ್ತರಿಗೆ ದೇಶದ ಪ್ರಸಕ್ತ ರಾಜಕೀಯತೆಯನ್ನು ತಿಳಿಸುವ ಕಾರ್ಯ ಮಾಡಲಿದೆ. ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಪರಂಗಿಪೇಟೆ,  ರಾಜ್ಯ ಮತ್ತು ಜಿಲ್ಲಾ ಮುಖಂಡರುಗಳು ಸಮಾವೇಶದಲ್ಲಿ ಬಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮವೂ ನಡೆಯಲಿದೆ ಎಂದು ಹೇಳಿದರು.

ದ.ಕ.ಜಿಲ್ಲೆ ಸೇರಿದಂತೆ ದೇಶದ 60 ಕಡೆಗಳಲ್ಲಿ ಪಕ್ಷದಿಂದ ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದು, ಅಭ್ಯರ್ಥಿಗಳ ಪಟ್ಟಿಯನ್ನು ಫೆ.27 ರಂದು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ದೇಶದಲ್ಲಿ ವಿವಿಧತೆಯಲ್ಲಿ ಏಕತೆ ಕಾಣಬೇಕು.































 
 

ಎಸ್‌. ಡಿ. ಪಿ. ಐ. ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷ ಅಬ್ದುಲ್ ಹಮೀದ್ ಸಾಲ್ಮರ ಮಾತನಾಡಿ, ಹಸಿವು ಮುಕ್ತ ಮತ್ತು ಭಯ ಮುಕ್ತ ರಾಷ್ಟ್ರ ಎಂಬ ಘೋಷಣೆಯೊಂದಿಗೆ ಪಕ್ಷವು ಎಲ್ಲಾ ಜಾತಿ ಧರ್ಮಗಳಲ್ಲಿ ಏಕತೆಯನ್ನು ಮೂಡಿಸುವ ಕೆಲಸ ಮಾಡುತ್ತಿದೆ. ಈ ದೇಶ ಬರೀ ಹಿಂದೂ ದೇಶವೆಂಬ ಕಲ್ಪನೆಯಲ್ಲಿ ಆಡಳಿತ ನಡೆಯುತ್ತಿರುವಾಗ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕೇವಲ ಒಂದು ಜಾತಿ, ಧರ್ಮವನ್ನು ಸೀಮಿತವಾಗದೆ ಬಸವಣ್ಣ, ಅಂಬೆಡ್ಕ‌ರ್, ನಾರಾಯಣ ಗುರುಗಳ ಕಲ್ಪಣೆಯನ್ನು ಮುಂದಿಟ್ಟು ದೇಶದಲ್ಲಿ ಸೌಹಾರ್ದತೆಯನ್ನು ಕಂಡುಕೊಳ್ಳಬೇಕು ಎಂದರು.

ಪತ್ರಿಕಾಗೋಷ್ಟಿಯಲ್ಲಿ ಎಸ್‌. ಡಿ. ಪಿ. ಐ. ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್, ಉಸ್ಮಾನ್ ಎ.ಕೆ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top