ಮಂಗಳೂರು: ಜೆರೋಸಾ ಶಾಲಾ ಶಿಕ್ಷಕಿಯೊಬ್ಬರು ಹಿಂದೂಗಳು ಹಾಗೂ ಶ್ರೀರಾಮ ಮಂದಿರದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಹಿನ್ನಲೆಯಲ್ಲಿ ಶಾಲೆ ಮುಂಭಾಗ ನಡೆದ ಪ್ರತಿಭಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಹಾಗೂ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಮತ್ತು ಇತರರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.
ಜೆರಾಲ್ಡ್ ಲೋಬೋ ಎಂಬವರು ನೀಡಿದ್ದ ದೂರಿನಂತೆ ಮಂಗಳೂರಿನಲ್ಲಿ ಶಾಸಕರು ಸಹಿತ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಕಾರ್ಪೊರೇಟರ್ ಗಳಾದ ಸಂದೀಪ್ ಹಾಗೂ ಭರತ್ ಕುಮಾರ್ ವಿರುದ್ಧವೂ ಮಂಗಳೂರು ದಕ್ಷಿಣ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು.
ಇದೀಗ ಬೆಂಗಳೂರಿನ ವಿಶೇಷ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.
ಶಾಸಕರಲ್ಲದೆ, ಅವರಿಗೂ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.