ಪುತ್ತೂರು: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ನಿಡ್ಪಳ್ಳಿ ಗ್ರಾಮ ಪಂಚಾಯತ್ ಸಹಕಾರದಲ್ಲಿ ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಮಹಾಪೋಷಕತ್ವದಲ್ಲಿ, ಚಿಗುರೆಲೆ ಸಾಹಿತ್ಯ ಬಳಗದ ಸಂಯೋಜನೆಯಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದ ಅಂಗವಾಗಿ ಗ್ರಾಮ ಸಾಹಿತ್ಯ ಸಂಭ್ರಮ – 2024 13ನೇ ಸರಣಿ ಕಾರ್ಯಕ್ರಮ ಫೆ.24 ಶನಿವಾರ ಬೆಳಗ್ಗೆ 10 ರಿಂದ ನಿಡ್ಪಳ್ಳಿ ಸಮುದಾಯ ಭವನದಲ್ಲಿ ನಡೆಯಲಿದೆ.
ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ರಕ್ಷಿತಾ ಬಿ. ಸಮಾರಂಭದ ಸರ್ವಾಧ್ಯಕ್ಷತೆ ವಹಿಸಲಿದ್ದು, ನಿಡ್ಪಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ. ವೆಂಕಟರಮಣ ಬೋರ್ಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕ.ಸಾ.ಪ. ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದು, ನಿಡ್ಪಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂಧ್ಯಾಲಕ್ಷ್ಮಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ರವೀಂದ್ರ ಶೆಟ್ಟಿ ನುಳಿಯಾಲು, ನಿಡ್ಪಳ್ಳಿ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್, ಬೆಟ್ಟಂಪಾಡಿ ಸಿ. ಆರ್. ಪಿ. ಪರಮೇಶ್ವರಿ ಪ್ರಸಾದ್ ಹಾಗೂ ನಿಡ್ಪಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಗೀತಾ. ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಯಕ್ಷಗಾನ, ಶಿಕ್ಷಣ ವಿದ್ವಾಂಸ ಡಾ. ಸದಾಶಿವ ಭಟ್ ಪಳ್ಳು, ಸಾಹಿತ್ಯ ಕ್ಷೇತ್ರದ ರಘುನಾಥ ರೈ ನುಳಿಯಾಲು, ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದ ಜನಾರ್ದನ ದುರ್ಗ, ಕ್ರೀಡೆ ಮತ್ತು ಸಾಹಿತ್ಯದ ಆಸೀಫ್ ತಂಬುತ್ತಡ್ಕ, ಪತ್ರಿಕೋದ್ಯಮ ಮತ್ತು ಸಾಹಿತ್ಯ ಭವ್ಯಾ ಪಿ.ಆರ್. ನಿಡ್ಪಳ್ಳಿ, ಸಂಗೀತ ಮತ್ತು ಯಕ್ಷಗಾನ ಸಮನ್ವಿ ರೈ, ಸಾಹಿತ್ಯದಲ್ಲಿ ಚಿತ್ರಾ ಎಸ್. ಅವರುಗಳನ್ನು ಅಭಿನಂದಿಸಲಾಗುವುದು.
ಕಾರ್ಯಕ್ರಮದಲ್ಲಿ ಬಾಲಕವಿಗೋಷ್ಠಿ, ಬಾಲಕಥಾಗೋಷ್ಠಿ, ಪ್ರವಾಸ ಕಥನ, ಸಾರ್ವಜನಿಕ ವಿಭಾಗದ ಕವಿಗೋಷ್ಠಿ, ಹಾಗೂ ನಿಡ್ಪಳ್ಲಿ, ಮುಂಡೂರು, ಚೂರಿಪದವು ಮತ್ತು ಬೆಟ್ಟಂಪಾಡಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು. ಕ. ಸಾ. ಪ. ಜಿಲ್ಲಾಧ್ಯಕ್ಷ ಡಾ. ಎಂ. ಪಿ. ಶ್ರೀನಾಥ್, ಪುತ್ತೂರು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.