ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ದನ ಕಳ್ಳತನ | ತನಿಖೆ ನಡೆಸುವುದರ ಜತೆಗೆ ಭದ್ರತಾ ವ್ಯವಸ್ಥೆ ಸರಿಪಡಿಸುವಂತೆ ವಿಹಿಂಪ, ಬಜರಂಗದಳದಿಂದ ಮನವಿ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಾಲಯದ  ವಠಾರದಿಂದ ದನ ಕಳ್ಳತನ ಬಗ್ಗೆ ತನಿಖೆ ನಡೆಸಿ,ಭದ್ರತಾ ವ್ಯವಸ್ಥೆ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ಮನವಿ ಸಲ್ಲಿಸಲಾಯಿತು.

ಪುತ್ತೂರು ಸೀಮಾಧಿಪತಿ ಶ್ರೀ ಮಹಾಲಿಂಗೇಶ್ವರ ದೇವರ ದೇವಮಾರು ಗದ್ದೆ ಹಾಗೂ ವಠಾರದಲ್ಲಿ ಈ ಹಿಂದಿನ ಒಂದು ವಾರದಿಂದ ಗೋ ಕಳ್ಳತನದ ಮಾಹಿತಿ ನಮ್ಮ ಸಂಘಟನೆಗೆ ಬಂದಿದ್ದು ದೇವಳದ ಭದ್ರತಾ ಸಿಬ್ಬಂದಿಗಳಿಗೆ ಮಾಹಿತಿ ಇದ್ದರೂ ಯಾವುದೇ ದೂರು ದಾಖಲಿಸದೆ ಇರುವುದರಿಂದ ಮುಂದಿನ ದಿನಗಳಲ್ಲಿ ಇಂತಹ ಗೋಕಳ್ಳತನ ನಡೆಯುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ದೂರು ಸಲ್ಲಿಸಿ ಇಲಾಖಾ ತನಿಖೆ ನಡೆಸಿ ಇಂತಹ ಕುಕೃತ್ಯಗಳನ್ನು ತಡೆಯುವಂತೆ ಹಾಗೂ ತಮ್ಮ ಭದ್ರತಾ ಸಿಬ್ಬಂದಿಗಳಿಗೆ ಸರಿಯಾದ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಬೇಕಾಗಿದೆ ಎಂದು   

ಶ್ರೀಮಹಾಲಿಂಗೇಶ್ವರ ದೇವಸ್ಥಾನ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಅವರಿಗೆ  ಮನವಿ  ಸಲ್ಲಿಸಲಾಯಿತು.



































 
 

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಕಾರ್ಯದರ್ಶಿ ಜಿತೇಶ್ ಬಲ್ನಾಡ್, ಬಜರಂಗದಳ ಪುತ್ತೂರು ನಗರ ಪ್ರಖಂಡ ಸಂಯೋಜಕ ಜಯಂತ್ ಕುಂಜೂರುಪಂಜ, ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡ ಸಂಯೋಜಕ ವಿಶಾಕ್ ಸಸಿಹಿತ್ಲು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top