ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಕುಡಿದು ತೂರಾಡಿದ ಗ್ರಾಮಕರಣಿಕ

ಕಡಬ: ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಕಂಠಪೂರ್ತಿ ಕುಡಿದು ಬಿದ್ದು ಹೊರಳಾಡುತ್ತಿದ್ದ ಗ್ರಾಮಕರಣಿಕನನ್ನು ಬಸ್ ಚಾಲಕ ಪೊಲೀಸ್‌ ಠಾಣೆಗೆ ಕರೆದೊಯ್ದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ.

ಕಂಠಪೂರ್ತಿ ಕುಡಿದು ನಶೆಯಲ್ಲಿದ್ದ ವ್ಯಕ್ತಿಯನ್ನು ಕಡಬ ತಾಲೂಕು ಗೋಳಿತೊಟ್ಟು ಗ್ರಾಮಕರಣಿಕ ನಾಗಸುಂದರ ಎಂದು ಗುರುತಿಸಲಾಗಿದೆ. ಈ ಹಿಂದೆಯು ಕರ್ತವ್ಯದ ವೇಳೆಯೇ ಮದ್ಯಪಾನದ ಚಟ ಹೊಂದಿರುವ ನಾಗಸುಂದರನ ಬಗ್ಗೆ ಮೇಲಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ನಾಗಸುಂದರನ ಮೇಲೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಸೂಚನೆ ನೀಡಿದ್ದರು.

ಈ ಬಗ್ಗೆ ಪೋಲಿಸ್ ಠಾಣೆಯಲ್ಲಿ ಎಚ್ಚರಿಕೆ ನೀಡಿ ಮುಂದೆ ಮದ್ಯಪಾನ ಸೇವಿಸಿ ಕೆಲಸಕ್ಕೆ ಬರುವುದಿಲ್ಲವೆಂದು ಮುಚ್ಚಳಿಕೆ ಬರೆದು ಕಳುಹಿಸಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top