ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಿದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೇರಾ | ಜಡ್ಜ್ ಹುದ್ದೆಗೇರಿದ ಅತೀ ಕಿರಿಯ ವ್ಯಕ್ತಿ

ಮಂಗಳೂರು: ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಿದ ಅತೀ ಕಿರಿಯ ವ್ಯಕ್ತಿ ಎಂಬುದಕ್ಕೆ ಬಂಟ್ವಾಳ ತಾಲೂಕಿನ ಬೊರಿಮಾರು ಮೂಲದ 25 ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೇರಾ ಪಾತ್ರರಾಗಿದ್ದಾರೆ.

2023 ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್ ಮಾಡುವ ಮೂಲಕ ಹುದ್ದೆಗೇರಿದ್ದಾರೆ.

ಮಂಗಳೂರಿನ ಎಸ್ ಡಿ ಎಂ ಕಾನೂನು ಕಾಲೇಜಿನಲ್ಲಿ ಬಿಬಿಎ ಮತ್ತು ಎಲ್ ಎಲ್ ಬಿ. ಪೂರೈಸಿದ ಜಾನ್ ಸಿಕ್ವೇರಾ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು, ಬಂಟ್ವಾಳದ ಬೊರಿಮಾರಿನ ಸೈಂಟ್ ಜೋಸೆಫ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಮಾಣಿ ಕರ್ನಾಟಕ ಹೈಸ್ಕೂಲ್ ನಲ್ಲಿ ಪ್ರೌಢ ಶಿಕ್ಷಣ, ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದರು.





























 
 

ಕಾನೂನು ಪದವಿ ಬಳಿಕ ಮಂಗಳೂರಿನಲ್ಲಿ ಬಾರ್ ಅಸೋಸಿಯೇಶನ್ ಸದಸ್ಯರಾಗಿ ತರಬೇತು ಆರಂಭಿಸಿದ್ದರು. ಮಂಗಳೂರಿನ ವಕೀಲರಾದ ದೀಪಕ್ ಡಿ’ಸೋಜಾ, ನವೀನ್ ಪಾಯಸ್ ಜತೆ ವೃತ್ತಿ ನಡೆಸಿದ್ದರು. 2022 ರಲ್ಲಿ ಮಂಗಳೂರಿನ ಕ್ರೈಸ್ತ ಧರ್ಮಪ್ರಾಂತ್ಯದ ಇಂಡಿಯನ್ ಕೆಥೋಲಿಕ್ ಯೂತ್ ಮೂಮೆಂಟ್ ಸಂಘಟನೆಯ ಅಧ್ಯಕ್ಷರಾಗಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top