ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ !

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ನೆಕ್ಕರೆ ಎಂಬಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನೆಕ್ಕರೆ ನಿವಾಸಿ ಆಟೋ ನಡೆಸುತ್ತಿದ್ದ ಕೃಷ್ಣಪ್ಪ ಪೂಜಾರಿ (60) ಆತ್ಮಹತ್ಯೆ ಮಾಡಿಕೊಂಡವರು.

ಭಾನುವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಕೃಷ್ಣಪ್ಪ ಈ ಕೃತ್ಯ ಎಸಗಿದ್ದಾರೆ. ಇತ್ತೀಚೆಗಷ್ಟೇ ಹಳೆ ಆಟೋವನ್ನು ಮಾರಿ ಹೊಸ ಆಟೋ ಖರೀದಿಸಿದ್ದರು ಎನ್ನಲಾಗಿದೆ. ವಿಪರೀತ ಕುಡಿತದ ಚಟ ಹೊಂದಿದ್ದ ಅವರು, ಸಾಲದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top