ಎರಡು ದಿನಗಳ ಹಿಂದೆ ಸಮುದ್ರದಲ್ಲಿ ಕೊಚ್ಚಿಕೊಂಡು ಹೋದ ವಿದ್ಯಾರ್ಥಿಯ ಮೃತದೇಹ ಪತ್ತೆ !

ಮಂಗಳೂರು: ಪಣಂಬೂರು ಬೀಚ್‌ನಲ್ಲಿ ಎರಡು ದಿನಗಳ ಹಿಂದೆ ಬೃಹತ್ ಅಲೆಗೆ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತುಕರಾಮ (13) ಮೃತದೇಹ ತಣ್ಣೀರುಬಾವಿ ಬಳಿ ಪತ್ತೆಯಾಗಿದೆ.

ಎರಡು ದಿನಗಳ ಹಿಂದೆ ಬೀಚ್‍ನಲ್ಲಿ ನೀರಾಟವಾಡುತ್ತಿದ್ದಾಗ ಬೃಹತ್ ಅಲೆಗೆ ಕೊಚ್ಚಿಹೋಗಿ ಮುಳುಗಿ ತುಕರಾಮ ನಾಪತ್ತೆಯಾಗಿದ್ದ. ಮೀನುಗಾರರು ಮೃತದೇಹ ತೇಲುತ್ತಿರುವುದನ್ನು ಕಂಡಿದ್ದು, ಧನಪಾಲ್ ಸಾಲ್ಯನ್ ಅವರು ದಡಕ್ಕೆ ಎಳೆದು ತಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬೈಕಂಪಾಡಿ ಮೀನಕಳಿಯ ಸರಕಾರಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ತುಕಾರಾಮ್ ಶಾಲೆ ಬಿಟ್ಟ ಬಳಿಕ ಸ್ನೇಹಿತ ಮಾರುತಿ ಜತೆ ಪಣಂಬೂರು ಬೀಚ್‌ಗೆ ಆಗಮಿಸಿ ನೀರಾಟದಲ್ಲಿ ತೊಡಗಿದ್ದ. ಆದರೆ ಈ ವೇಳೆ ಬೃಹತ್ ಅಲೆಗೆ ಕೊಚ್ಚಿ ಹೋಗಿದ್ದ. ಬೀಚ್‌ನಲ್ಲಿದ್ದ ಇತರರು ವಿದ್ಯಾರ್ಥಿ ಮುಳುಗುತ್ತಿರುವುದನ್ನು ಕಂಡು ಬೀಚ್‌ನ ರಕ್ಷಣ ದಳಕ್ಕೆ ತಿಳಿಸಿದರು. ತಕ್ಷನ ಜೆಟ್ ಸ್ಟೀ ಮೂಲಕ ಕಾಪಾಡಲು ಯತ್ನಿಸಿದರೂ ಆತನ ಸುಳಿವು ಸಿಕ್ಕಿರಲಿಲ್ಲ



































 
 

ಬಾಲಕ ಉತ್ತರ ಕರ್ನಾಟಕ ಮೂಲದವರಾಗಿದ್ದು, ಕೆಲಸದ ನಿಮಿತ್ತ ಬಂದಿದ್ದ ಇವರ ಪೋಷಕರು ಬೈಕಂಪಾಡಿ ಮೀನಕಳಿಯ ಬಳಿ ವಾಸವಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top