ಬೆಂಗಳೂರು: ನಿನ್ನೆ ನಡೆದ ರಾಜ್ಯಸಭಾ ಚುಣಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಬೆಂಬಲಿಗರು ವಿಧಾನಸೌಧದ ಒಳಗೆ ಪಾಕಿಸ್ತಾನಕ್ಕೆ ಜೈಕಾರ ಕೂಗಿರುವುದು ಹಾಗೂ ಇದನ್ನು ಪ್ರಶ್ನಿಸಿದ ಪತ್ರಕರ್ತರಿಗೆ ನಿಂದಿಸಿರುವುದನ್ನು ವಿಶ್ವ ಹಿಂದೂ ಪರಿಷದ್ ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ.
ಇಂತಹ ಬೆಳವಣಿಗೆಗಳು ದೇಶಕ್ಕೆ ಅಪಾಯಕಾರಿಯಾಗಿದ್ದು, ನಾಸೀರ್ ಹುಸೇನ್ ನ ರಾಜ್ಯಸಭಾ ಸದಸ್ಯತ್ವವನ್ನು ರದ್ದು ಮಾಡಬೇಕು.
ಅಲ್ಲದೆ ಶತ್ರುದೇಶಕ್ಕೆ ಜೈಕಾರ ಕೂಗಿದವರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಆಗ್ರಹಿಸಿದೆ.