ಪುತ್ತೂರು: ವಿ.ಎಂ.ಎಫ್. ಕೊಲ್ಲಪದವು ಹಾಗೂ ಅಡ್ಯನಡ್ಕ ಬ್ರಿಗೆಡ್ ಬ್ರದರ್ಸ್ ಆಶ್ರಯದಲ್ಲಿ ಹಿಂದೂ ಬಾಂಧವರ ‘‘ಶ್ರೀರಾಮ ಟ್ರೋಫಿ’ ಕ್ರಿಕೆಟ್ ಹಾಗೂ ಕಬಡ್ಡಿ ಪಂದ್ಯಾಟ ಮಾ.2 ಹಾಗೂ 3 ರಂದು ಕೊಲ್ಲಪದವು ವಿಷ್ಣುಮೂರ್ತಿ ಮೈದಾನದಲ್ಲಿ ನಡೆಯಲಿದೆ.
ಮಾ.2 ಶನಿವಾರ ಬೆಳಿಗ್ಗೆ 8.30 ಕ್ಕೆ ಕ್ರಿಕೆಟ್ ಪಂದ್ಯಾಟದ ಉದ್ಘಾಟನಾ ಸಮಾರಂಭವದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಶಂಕರ ಸಾರಡ್ಕ ದೀಪ ಪ್ರಜ್ವಲನೆ ಮಾಡಲಿದ್ದು, ಕೇಪು ಗ್ರಾಪಂ ಅಧ್ಯಕ್ಷ ರಾಘವ ಮಣಿಯಾಣಿ ಸಾರಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಪುಣಚ ಗ್ರಾಪಂ ಅಧ್ಯಕ್ಷೆ ಯಶೋಧ, ಪುಣಚ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಜನಾರ್ದನ ಭಟ್ ಗೌರವ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಮಾಣಿಲ ಗ್ರಾಪಂ ಮಾಜಿ ಅಧ್ಯಕ್ಷ ರಾಜೇಶ್ ಬಾಳೆಕಲ್ಲು, ಪೆರುವಾಯಿ ಗ್ರಾಪಂ ಸದಸ್ಯ ವರುಣ್ ರೈ, ಮೂಡಂಬೈಲು ಮಹಿಷಾಮರ್ಧಿನಿ ಭಜನಾ ಮಂದಿರದ ಮಾಜಿ ಅಧ್ಯಕ್ಷ ಜಯರಾಮ್ ರೈ ಮೂಡಂಬೈಲು ಭಾಗವಹಿಸಲಿದ್ದಾರೆ.
ಮಾ.3 ಭಾನುವಾರ ಸಂಜೆ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕೇಪು ಗ್ರಾಪಂ ಮಾಜಿ ಅಧ್ಯಕ್ಷ ದೇವದಾಸ್ ಎಂ. ವಹಿಸಲಿದ್ದು, ಪೆರ್ಲ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷೆ ಶ್ಯಾಮಲಾ ಪತ್ತಡ್ಕ ಗೌರವ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ತಾಪಂ ಸದಸ್ಯ ಹರಿಕೃಷ್ಣ ಶೆಟ್ಟಿ ಮೂಡಂಬೈಲು, ಉದ್ಯಮಿಗಳಾದ ಉದಯ ಚೆಟ್ಟಿಯಾರ್ ಪೆರ್ಲ, ಅಜಯ್ ಪೈ ಪೆರ್ಲ, ಸರವು ಸುರಕ್ಷಾ ಮಡ್ ಬ್ಲಾಕ್ ಮಾಲಕ ಸಾತ್ವಿಕ್ ಖಂಡೇರಿ, ಅಡ್ಯನಡ್ಕ ಬಿಜೆಪಿ ಬೂತ್ ಅಧ್ಯಕ್ಷ ಶ್ರೀಕೃಷ್ಣ ಕೋಡಿಯಡ್ಕ ಭಾಗವಹಿಸಲಿದ್ದಾರೆ.
ಸಂಜೆ 6.30 ರಿಂದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ತಂಡದಿಂದ ‘ನಾಟ್ಯ ವೇದ ಗಾನ ಸಂಭ್ರಮ’ ಪ್ರದರ್ಶನಗೊಳ್ಳಲಿದೆ.
ಮಾ.3 ಭಾನುವಾರ ರಾತ್ರಿ 8.30 ಕ್ಕೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ವಹಿಸಲಿದ್ದು, ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ, ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಮಂಗಳೂರು ಶಾಸಕ ಡಾ.ವೈ.ಭರತ್ ಶೆಟ್ಟಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳ್ಳಿಪ್ಪಾಡಿಗುತ್ತು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಗೌರವ ಉಪಸ್ಥಿತರಿರುವರು. ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿಶೇಷ ಅತಿಥಿಯಾಗಿ ಭಾಗವಹಿಸುವರು. ಮುಖ್ಯ ಅತಿಥಿಗಳಾಗಿ ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎ.ಮಂಜುನಾಥ, ವಿಕ್ರಮ ಟಿವಿ ಸ್ಥಾಪಕ ಮಹೇಶ್ ವಿಕ್ರಂ ಹೆಗ್ಗಡೆ, ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ರಾಷ್ಟ್ರ ರಕ್ಷಣಾ ಪಡೆಯ ಸ್ಥಾಪಕ, ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ,, ಬಿರುವೆರ್ ಕುಡ್ಲ ಸ್ಥಾಪಕ ಉದಯ್ ಪೂಜಾರಿ, ಕುಂಬಳೆ ಬಿಜೆಪಿ ಮಂಡಲ ಅಧ್ಯಕ್ಷ ಸುನೀಲ್ ಅನಂತಪುರ, ಚಿಕ್ಕಮಗಳೂರು ಜಿಲ್ಲೆ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿ ಅಲ್ದೂರು, ಪುಣಚ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ದಯಾನಂದ ಶೆಟ್ಟಿ ಉಜಿರೆಮಾರ್, ದ.ಕ.ಜಿಲ್ಲಾ ಬಿಜೆಪಿ ಯುವಮೋರ್ಚಾ ಮಾಜಿ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಸಮಾಜ ಸೇವಕ ಸಿದ್ದೇರಾಜೇ ಗೌಡ, ಎಣ್ಮಕಜೆ ಗ್ರಾಪಂ ಅಧ್ಯಕ್ಷ ಸೋಮಶೇಖರ್ ಜೆ.ಎಸ್., ಧಾರ್ಮಿಕ ಮುಖಂಡ ಸದಾಶಿವ ಶೆಟ್ಟಿ ಕನ್ಯಾನ, ಭಾರತೀಯ ಈಜು ತರಬೇತುದಾರ ಪಾರ್ಥ ವಾರಣಾಶಿ, ವಿಜಯನಗರ ಜಿಲ್ಲೆ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ಪ್ರದೀಪ್ ಕುಮಾರ್, ಬಿಜೆಪಿ ಪುತ್ತೂರು ಗ್ರಾಮಾಂತರ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಬಂಟ್ವಾಳ ನ್ಯಾಯವಾದಿ ಗಿರೀಶ್ ಮುಳಿಯಾಲ ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ಅಯೋಧ್ಯೆ ಕರಸೇವಕರಿಗೆ, ಹಿರಿಯ ಕಾರ್ಯಕರ್ತರಿಗೆ, ಪೌರ ಕಾರ್ಮಿಕರಿಗೆ, ದೈವ ನರ್ತಕರಿಗೆ, ನಮ್ಮೂರ ಹೆಮ್ಮೆಯ ಸಾಧಕರಿಗೆ ಸನ್ಮಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.