ಬೆಂಗಳೂರು : ಇಂದಿನಿಂದ ಮಾ.22 ರವರೆಗೆ ರಾಜ್ಯಾದ್ಯಂತ ಈ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 01.30 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ. .ಪರೀಕ್ಷೆಗಳನ್ನು ಸುಗಮ ಹಾಗೂ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ 1973 ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಬಾರಿ ಕರ್ನಾಟಕ ರಾಜ್ಯಾದ್ಯಂತ 6,98,624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ. 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇದ್ದು, ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯಲಿದ್ದು, ಉಳಿದ 20 ಅಂಕಗಳು ಅಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಖಜಾನೆಗಳಿಂದ ಪ್ರಶ್ನೆಪತ್ರಿಕೆ ಸ್ವೀಕರಿಸಿ, ಅವುಗಳನ್ನು ಪರೀಕ್ಷಾ ಕೇಂದ್ರಗಳಿಗೆ ವಿತರಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಕ್ಕೂ ಮುಖ್ಯ ಅಧೀಕ್ಷಕ ನೇಮಿಸಲಾಗುವುದು. ಕೇಂದ್ರದ ಕೊಠಡಿ ಮೇಲ್ವಿಚಾರಕ ಸಿಬ್ಬಂದಿ ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳು ಮೊಬೈಲ್ ಸೇರಿ ವಿದ್ಯನ್ಮಾನ ಉಪಕರ ಕಡ್ಡಾಯ ನಿಷೇಧಿಸಿದೆ. ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ಗುರುತಿನ ಚೀಟಿ ಕಡ್ಡಾಯವಾಗಿ ಧರಿಸಬೇಕು.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರ, ಅಕ್ರಮ ನಡೆಯದಂತೆ ಷರತ್ತಿಗೊಳಪಟ್ಟು ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಆದೇಶದನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝೆರಾಕ್ಸ್, ಟೈಪಿಂಗ್ 2 ಮುಂತಾದವುಗಳನ್ನು ನಿಷೇಧಿಸಲಾಗಿದೆ.
200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮಾ.1 ರಂದು ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ, ಮಾ.4 ರಂದು ಗಣಿತ ಪರೀಕ್ಷೆ, ಮಾ.5 ರಂದು ರಾಜ್ಯ ಶಾಸ್ತ್ರ ಸಂಖ್ಯಾಶಾಸ್ತ್ರ ಮಾ.6 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಮಾ.7 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಮಾ.9 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ ಭೂಗರ್ಭ ಶಾಸ್ತ್ರ ಗೃಹ ವಿಜ್ಞಾನ, ಮಾ.11 ತರ್ಕಶಾಸ್ತ್ರ ವ್ಯವಹಾರ ಅಧ್ಯಯನ, ಮಾ.13 ಇಂಗ್ಲಿಷ್, ಮಾ. 15 ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ ರಸಾಯನ ಶಾಸ್ತ್ರ ಮೂಲಗಣಿತ, ಮಾ.16 ಅರ್ಥಶಾಸ್ತ್ರ ಮಾ.18 ಭೂಗೋಳ ಶಾಸ್ತ್ರ ಜೀವಶಾಸ್ತ್ರ ಮಾ.20 ಸಮಾಜಶಾಸ್ತ್ರ ವಿದ್ಯುನ್ಮಾನ ಶಾಸ್ತ್ರ ಗಣಕ ವಿಜ್ಞಾನ ಪರೀಕ್ಷೆ, ಮಾ.22 ಹಿಂದಿ ಪರೀಕ್ಷೆಗಳು ನಡೆಯಲಿದೆ.
ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸೋಣ. ಆಲ್ದಿ ಬೆಸ್ಟ್