ವಿವೇಕಾನಂದ ಸ್ವಾಯತ್ತ ಕಾಲೇಜಿನ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಪುತ್ತೂರು: ಬದುಕು ಎಂದರೆ ಗೆಲ್ಲಬೇಕು ಎಂಬ ಹೋರಾಟ, ಸೋತರೆ ಸೋಲನ್ನು ಒಪ್ಪಿಕೊಂಡು ಗೆಲ್ಲಲು ಮತ್ತೆ ಹೋರಾಡುವುದು, ಅದೇ ಜೀವನದ ನಿಯಮ. ಅಂತೆಯೇ ಕ್ರೀಡೆಯಲ್ಲಿ ಸೋಲು ಗೆಲುವು ಎಂಬುದು ಇದ್ದದ್ದೆ. ಹಾಗಾಗಿ ಧನಾತ್ಮಕವಾಗಿ ಭಾಗವಹಿಸುವುದು ಮುಖ್ಯ. ಕ್ರೀಡೆ ಕೇವಲ ಆಟವಲ್ಲ ಅದು ಬದುಕಿಗೊಂದು ಪಾಠ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ಹೇಳಿದರು.

ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ )ಲ್ಲಿ ಆಯೋಜಿಸಿದ 2023-24 ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಮಾತನಾಡಿ, ನಾವು ಬೌದ್ಧಿಕವಾಗಿ ಹೇಗೆ ದುಡಿಯುತ್ತೇವೆಯೋ ಹಾಗೆಯೇ ಶಾರೀರಿಕವಾಗಿ ಶಿಸ್ತು, ಕ್ರಮದಿಂದ ನಮ್ಮನ್ನು ನಾವು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ಇದು ನಮ್ಮ ದೈಹಿಕ ಆರೋಗ್ಯದ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ ಎಂದರು.



































 
 

ಕಾಲೇಜಿನ ಎನ್ ಸಿ ಸಿ, ಎನ್ ಎಸ್ ಎಸ್, ರೋವರ್ ಆಂಡ್ ರೇಂಜರ್ಸ್ ಮತ್ತು ಯೂಥ್ ರೆಡ್ ಕ್ರಾಸ್ ಹಾಗೂ ಪ್ರತಿ ತರಗತಿಗಳಿಂದ ಆಕರ್ಷಕ ಪಥಸಂಚಲನ ನಡೆದು ಬಳಿಕ ಅತಿಥಿಗಳು ಕ್ರೀಡಾ ದ್ವಜಾರೋಹಣ ನೆರವೇರಿಸಿದರು.  ದ್ವಿತೀಯ ಬಿಕಾಂ ವಿಭಾಗದ ವಿದ್ಯಾರ್ಥಿ, ಕ್ರೀಡಾಪಟು ಗುರುಪ್ರಸಾದ್ ಪ್ರತಿಜ್ಞಾವಿಧಿ ಬೋಧಿಸಿದರು. ಕ್ರೀಡೆಯಲ್ಲಿ ವಿಶೇಷ ಸಾಧನೆಗೈದ ಕಾಲೇಜಿನ ಕ್ರೀಡಾಪಟುಗಳನ್ನು ಗುರುತಿಸಲಾಯಿತು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿ. ಗಣಪತಿ ಭಟ್, ಪರೀಕ್ಷಾಂಗ ಕುಲ ಸಚಿವ ಮತ್ತು ಕನ್ನಡ ವಿಭಾಗದ ನಿವೃತ್ತ ಮುಖ್ಯಸ್ಥ ಡಾ ಶ್ರೀಧರ್ ಹೆಚ್. ಜಿ., ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ನಾಯ್ಕ್ ಬಿ ಉಪಸ್ಥಿತರಿದ್ದರು. ವಿದ್ಯಾರ್ಥಿ ರುತ್ವಿಕ್ ಎಚ್ ಸ್ವಾಗತಿಸಿ, ವಿದ್ಯಾರ್ಥಿನಿ ಪ್ರೇಕ್ಷಿತಾ ಶೆಟ್ಟಿ ಕೆ. ವಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ರವಿ ಶಂಕರ್ ವಿ. ಎಸ್. ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top