ಎಸ್.ಬಿ.ಜಯರಾಮ ರೈ ಬಳಜ್ಜ 3ನೇ ಬಾರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆ

ಪುತ್ತೂರು : ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ  ಎಸ್.ಬಿ ಜಯರಾಮ ರೈ ಬಳಜ್ಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಸತತ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಪ್ರತಿಷ್ಠಿತ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ಕೆ.ಎಮ್.ಎಫ್) ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 ಸಹಕಾರಿ ಕ್ಷೇತ್ರದ ಹಿರಿಯ ಧುರೀಣರೂ, ಹಲವಾರು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಸಂಸ್ಥೆಗಳಲ್ಲಿ ಹಂತ-ಹಂತವಾಗಿ ಬೆಳೆದು ಸ್ಕ್ಯಾಡ್ಸ್ ನ ನಿರ್ದೇಶಕರೂ, ಶ್ರೀ ಕ್ಷೇತ್ರ ಕೆಯ್ಯೂರು ಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರು, ಶ್ರೀ ಹೊಸಮ್ಮ ದೈವಸ್ಥಾನ ಪಲ್ಲತ್ತಡ್ಕ ಆಡಳಿತ ಸಮಿತಿ ಅಧ್ಯಕ್ಷರು, ಈ ಹಿಂದೆ ಪಿ.ಎಲ್‌.ಡಿ ಬ್ಯಾಂಕ್ ನ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅತ್ಯುತ್ತಮ ನಿರ್ವಹಣೆಗಾಗಿ ಸರ್ವಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ ಮತ್ತು ರಾಜ್ಯ ಪ್ರಶಸ್ತಿ ಪಡೆಯಲು ಕಾರಣಕರ್ತರೂ, ಸರಳ ಸಜ್ಜನಿಕೆಯ ನಾಯಕರೂ ಆಗಿರುವ ಹಾಗೂ ಹಲವು ಪ್ರಶಸ್ತಿಗಳಿಂದ ಪುರಸ್ಕೃತಗೊಂಡಿರುವ ಎಸ್.ಬಿ. ಜಯರಾಮ ರೈ ಅವರು ಇದೀಗ ಮತ್ತೊಮ್ಮೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ ನಿರ್ದೇಶಕ ಸ್ಥಾನಕ್ಕೆ 3ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top