ರಾಷ್ಟ್ರಮಟ್ಟದ ತಂತ್ರಜ್ಞಾನ ಮೇಳ ‘ಅಂತರ್ಯ-2024’ ಸಮಾರೋಪ

ಪುತ್ತೂರು: ಕಾರ್ಪೋರೇಟ್ ಸಂಸ್ಥೆಗಳು ಬಯಸುವ ತಂತ್ರಜ್ಞಾನಗಳು ಪಠ್ಯಕ್ರಮದ ಮೂಲಕ ತಮ್ಮನ್ನು ತಲಪಲು ಒಂದೆರಡು ವರ್ಷಗಳು ಬೇಕಾಗುತ್ತದೆ. ಈ ಅಂತರವನ್ನು ಕಡಿಮೆ ಮಾಡಲು ವಿದ್ಯಾರ್ಥಿಗಳು ಪೂರಕ ವಿಷಯಗಳನ್ನು ಕಲಿಯುವುದು ಅತೀ ಅಗತ್ಯ ಎಂದು ಪುತ್ತೂರಿನ ವೆಬ್ ಪೀಪಲ್ ಸಂಸ್ಥೆಯ ಸಹ ಸಂಸ್ಥಾಪಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಶ್ರೀನಿವಾಸ್ ಹೇಳಿದರು.

ಅವರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಆಶ್ರಯದಲ್ಲಿ ನಡೆದ ರಾಷ್ಟ್ರ ಮಟ್ಟದ ತಂತ್ರಜ್ಞಾನ ಮೇಳ ಅಂತರ್ಯ-2024 ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಇಂಟರ್ನೆಟ್, ವೃತ್ತಪತ್ರಿಕೆಗಳು, ಆನ್ಲೈನ್ ಕೋರ್ಸುಗಳು, ವಿಚಾರಸಂಕಿರಣಗಳು, ಕಾರ್ಯಾಗಾರಗಳು ಮುಂತಾದವುಗಳಿಂದ ನಾವು ಹೊಸ ಹೊಸ ವಿಷಯಗಳನ್ನು ಕಲಿತುಕೊಳ್ಳಬಹುದು. ಕಲಿಯುವುದನ್ನು ಸರಿಯಾಗಿ ಕಲಿತು ಪರಿಣತರಾದರೆ ಅದು ಜೀವನದ ಔನ್ನತ್ಯಕ್ಕೆ ದಾರಿಯಾಗುತ್ತದೆ ಎಂದರು.



































 
 

ಕಾಲೇಜು ಆಡಳಿತ ಮಂಡಳಿ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್. ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಉನ್ನತಿಗಾಗಿ ಪಾಠ, ಪಠ್ಯೇತರ ವಿಷಯಗಳು, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹೀಗೆ ಎಲ್ಲಾ ವಿಭಾಗಗಳಲ್ಲಿಯೂ ಕಾಲೇಜು  ಪ್ರೋತ್ಸಾಹವನ್ನು ನೀಡುತ್ತದೆ. ಇದರಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಯೋಜನವನ್ನು ಪಡೆದುಕೊಳ್ಳುವುದು ವಿದ್ಯಾರ್ಥಿಗಳ ಕರ್ತವ್ಯ ಎಂದರು.

ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಶುಭ ಹಾರೈಸಿದರು. ಎಂಸಿಎ ವಿಭಾಗದ ನಿರ್ದೇಶಕಿ ಡಾ.ವಂದನಾ.ಬಿ.ಎಸ್, ವಿದ್ಯಾರ್ಥಿ ಪ್ರತಿನಿಧಿ ಅನಿರುದ್ಧ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಸ್ನಾತಕ ವಿಭಾಗದಲ್ಲಿ ಎಸ್‌ಡಿಎಂ ಕಾಲೇಜು ಉಜಿರೆ ಪ್ರಥಮ ಹಾಗೂ ಸೈಂಟ್ ಫಿಲೋಮಿನ ಕಾಲೇಜು ಪುತ್ತೂರು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಗಳಿಸಿಕೊಂಡವು. ಸ್ನಾತಕೋತ್ತರ ವಿಭಾಗದಲ್ಲಿ ಎನ್‌ಎಂಎಎಂಐಟಿ ನಿಟ್ಟೆ ಪ್ರಥಮ ಹಾಗೂ ಸೈಂಟ್ ಆಗ್ನೇಸ್ ಕಾಲೇಜು ಮಂಗಳೂರು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡವು.

ಎಂಸಿಎ ವಿಭಾಗದ ಪ್ರೊ.ರಮೇಶ್ ಸ್ವಾಗತಿಸಿ, ವಿದ್ಯಾರ್ಥಿ ಪ್ರತಿನಿಧಿ ಅನಿರುದ್ದ್ ವಂದಿಸಿದರು. ಸಂಕೇತ್ ಹಾಗೂ ಶರಣ್ಯ ಕಾರ್ಯಕ್ರಮ ನಿರ್ವಹಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top