ಬಂಟ್ವಾಳ: ಪಾದಚಾರಿಗೆ ಸರಕಾರಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿ ಮೃತಪಟ್ಟ ಘಟನೆ ಮಂಗಳವಾರ ಪರಂಗಿಪೇಟೆಯಲ್ಲಿ ತಡರಾತ್ರಿ ನಡೆದಿದೆ.
ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಪಾದಚಾರಿಯನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
ಪುತ್ತೂರು ಅರಣ್ಯ ಇಲಾಖೆಗೆ ಸೇರಿದ ವಾಹನ ಇದಾಗಿದ್ದು, ಬೀಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.