ಪುತ್ತೂರು: ತುಮಕೂರಿನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಷಣ ಮಾಡಲು ತೆರಳಿದ ಸಂಘ ಪರಿವಾರದ ಮುಖಂಡ ಮುರಳೀಕೃಷ್ಣ ಹಸಂತಡ್ಕ ಅವರನ್ನು ಬಂಧಿಸಿರುವುದು ಖಂಡನೀಯ ಎಂದು ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾಂಗ್ರೇಸ್ ರಾಜ್ಯದಲ್ಲಿ ಅಡಳಿತಕ್ಕೆ ಬಂದ ಮೇಲೆ ಭಯೋತ್ಪಾದನೆಯ ಕರಿನೆರಳು ದಟ್ಟವಾಗಿರುವುದಕ್ಕೆ ಸಾಕ್ಷಿಯಾಗಿದ್ದು, ಇತ್ತೀಚೆಗೆ ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸಭೆಯಲ್ಲಿ ಪಾಕ್ ಪರವಾಗಿ ಘೋಷಣೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಇವೆಲ್ಲಾ ಘಟನೆಯಿಂದ ರಾಜ್ಯದ ಜನತೆ ಭಯಭೀತರಾಗುವಂತೆ ಮಾಡಿದೆ.
ಆದ್ದರಿಂದ ರಾಜ್ಯದ ಜನತೆಗೆ ನೈತಿಕ ಸ್ಥೈರ್ಯ ತುಂಬಲು ಅಲ್ಪಸಂಖ್ಯಾತರ ಮಿತಿಮೀರಿದ ತುಷ್ಟೀಕರಣಕ್ಕೆ ಕಡಿವಾಣ ಹಾಕಲು ಸಂಘಪರಿವಾರದ ಮುಖಂಡ ಮುರಳೀಕೃಷ್ಣ ಹಸಂತಡ್ಕರವರು ತುಮಕೂರಿಗೆ ಪ್ರತಿಭಟನೆಗೆ ತೆರಳುವ ಸಂದರ್ಭದಲ್ಲಿ ಬಂಧಿಸಿರುವುದು ಖಂಡನೀಯ ಹಾಗೂ ಈ ರೀತಿಯ ವರ್ತನೆಯಿಂದ ರಾಜ್ಯದ ಕಾಂಗ್ರೇಸ್ ಸರಕಾರ ಭಯೋತ್ಪಾದನೆಯನ್ನು ಮಾಡುವವರಿಗೆ ಪರೋಕ್ಷವಾಗಿ ಬೆಂಬಲ ನೀಡಿದ ಹಾಗೆ ಆಗುತ್ತದೆ ಎಂದು ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವ ಹೇಳಿದ್ದಾರೆ.