ನಗರದಲ್ಲಿ ತೀರಾ ಹದಗೆಟ್ಟ ರಸ್ತೆಗಳನ್ನು ದುರಸ್ತಿಪಡಿಸುವಂತೆ ಪೌರಾಯುಕ್ತರಿಗೆ ಪುತ್ತಿಲ ಪರಿವಾರದಿಂದ ಮನವಿ | ಪ್ರತಿಭಟನೆ ಎಚ್ಚರಿಕೆ ನೀಡಿದ ಪುತ್ತಿಲ ಪರಿವಾರ

ಪುತ್ತೂರು: ನಗರದ ಪ್ರಮುಖ ರಸ್ತೆಗಳು ವಾಹನ ಸಂಚಾರಕ್ಕೆ ಅಸಾಧ್ಯವಾಗಿರುವ ರೀತಿಯಲ್ಲಿ ಇದ್ದು ಪ್ರತಿನಿತ್ಯ ಅಪಘಾತಗಳು ನಡೆಯುತ್ತಿದೆ. ತಕ್ಷಣ ರಸ್ತೆ ದುರಸ್ತಿಪಡಿಸಬೇಕೆಂದು ಪುತ್ತಿಲ ಪರಿವಾರ ನಗರಸಭೆ ಪೌರಾಯುಕ್ತರಿಗೆ ಮನವಿ ಮೂಲಕ ವಿನಂತಿಸಿದೆ.

ಪುತ್ತೂರು ಗಾಂಧಿಕಟ್ಟೆ ಬಳಿ ರಸ್ತೆ ಸಹಿತ  ವಿಶ್ವಕರ್ಮ ಸಭಾಭವನದ ಬಳಿಯಲ್ಲಿ ಹದೆಗೆಟ್ಟಿರುವ ಈ ರಸ್ತೆಯನ್ನು ತಕ್ಷಣ ಸರಿಪಡಿಸಿ ವಾಹನ ಸಂಚಾರಕ್ಕೆ ಯೋಗ್ಯವಾಗಿ ದುರಸ್ಥಿಗೊಳಿಸಬೇಕೆಂದು ಮನವಿಯಲ್ಲಿ ತಿಳಿಸಿದೆ.

ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳದಿದ್ದರೆ. ಮುಂದಿನ ದಿವಸಗಳಲ್ಲಿ ರಸ್ತೆ ತಡೆಮಾಡಿ ಪ್ರತಿಭಟನೆಯನ್ನು ಸಾರ್ವಜನಿಕರ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗುವುದು ಎಂದು ಮನವಿಯಲ್ಲಿ ಉಲ್ಲೇಖಿಸಿದೆ.































 
 

ಈ ಸಂದರ್ಭದಲ್ಲಿ ಪುತ್ತಿಲ ಪರಿವಾರದ  ಪ್ರಮುಖರಾದ ಪ್ರಸಾದ್ ತಿಂಗಳಾಡಿ , ರಾಜು ಶೆಟ್ಟಿ , ರೂಪೇಶ್ ನಾಯಕ್ ಹಾಜರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top